ಬೆಂಗಳೂರು: ಕೇರಳಕ್ಕೆ ಮಾನ್ಸೂನ್ ಮಾರುತಗಳು ಅಪ್ಪಳಿಸಿದರೇ, ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ರಾಜ್ಯದ ಹಲವೆಡೆ ಧಾರಾಕಾರ ಮಳೆ (Rain) ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡು ನಾನಾ ಅವಾಂತರಗಳು ಸೃಷ್ಟಿಯಾಗಿವೆ.
ಚಿಕ್ಕಮಗಳೂರಿನ (Chikkamagaluru) ಮಲೆನಾಡು ಭಾಗದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಕೆಲ ಗ್ರಾಮಗಳಲ್ಲಿ ವಿದ್ಯುತ್ ಕಂಬ, ಬೃಹತ್ ಮರಗಳು ಧರೆಗುರುಳಿವೆ. ಮೂಡಿಗೆರೆ ತಾಲೂಕಿನ ಜಾರಗಲ್ ಗ್ರಾಮದಲ್ಲಿ ಮನೆ ಪಕ್ಕದ ತಡೆಗೋಡೆ ಕುಸಿದಿದೆ. ಚಕ್ಕಮಕ್ಕಿ ಗ್ರಾಮದಲ್ಲಿ ಗ್ರಾಮದಲ್ಲಿ ಶೆಡ್ ಕುಸಿದು 3 ಕುರಿಗಳು ಸಾವನ್ನಪ್ಪಿವೆ. ತ್ರಿಪುರ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು, ಕಾರು ಜಖಂಗೊಂಡಿದೆ. ಇದನ್ನೂ ಓದಿ: ಮೇ 26ರಿಂದ 2 ದಿನ ಮೋದಿ ಗುಜರಾತ್ ಪ್ರವಾಸ – 53,414 ಕೋಟಿ ರೂ. ವೆಚ್ಚದ ಯೋಜನೆಗಳ ಉದ್ಘಾಟನೆ
ಹಾಸನ (Hassan) ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಭಾಗದಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ ಆಗಿದೆ. ಭಾಗಮಂಡಲದ ಕೊಟ್ಟೂರು ಬಳಿ ರಸ್ತೆ ಅಡ್ಡಲಾಗಿ ಮರ ಬಿದ್ದು, ಕೆಲಕಾಲ ಸಂಚಾರಕ್ಕೆ ತೊಡಕುಂಟಾಯಿತು. ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಕದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. 31 ಮೀಟರ್ ನೀರು ಶೇಖರಣೆಯ ಡ್ಯಾಂ ಇದಾಗಿದ್ದು, ಕಾರವಾರ ಶಾಸಕ ಸತೀಶ್ ಸೈಲ್, ಡಿಸಿ ಲಕ್ಷ್ಮಿಪ್ರಿಯಾ ಬಾಗಿನ ಅರ್ಪಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಕೊರೋನಾಗೆ ಮೊದಲ ಬಲಿ
ಪೂರ್ವ ಮುಂಗಾರು ಮಳೆ ಆರ್ಭಟಕ್ಕೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಯಗಚಿ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, 500 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಗರಿಷ್ಠ ಮಟ್ಟ 3.162.92 ಅಡಿಗಳಾಗಿದ್ದು ಇಂದು 3.160.10 ಅಡಿಗಳು ನೀರು ಸಂಗ್ರಹವಾಗಿದೆ. ಮೇ 28 ರವೆರೆಗೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಾಗೂ ಬೆಂಗಳೂರಿನಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುತ್ತದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ. ಇದನ್ನೂ ಓದಿ: 3 ವರ್ಷಗಳ ಬಳಿಕ ಮತ್ತೆ ವಕ್ಕರಿಸಿದ ಕೊರೊನಾ – ದೇಶದ ಹಲವು ರಾಜ್ಯಗಳಲ್ಲಿ JN1 ಎಂಟ್ರಿ