ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 14ರವರೆಗೆ ಮಳೆ ಅಲರ್ಟ್ ನೀಡಲಾಗಿದೆ. ಗುರುವಾರ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ
ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ರಾಜಾ ರಘುವಂಶಿ ಕೊಲೆ ಪ್ರಕರಣ – ಹಂತಕಿ ಸೇರಿ ಐವರನ್ನು ಮೇಘಾಲಯಕ್ಕೆ ಕರೆತಂದ ಪೊಲೀಸರು
ಜೂನ್ 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: Kolar | ಮಾವಿನ ಹಣ್ಣಿಗೆ ಬೆಲೆ ಕುಸಿತ – ಇಂದು ಶ್ರೀನಿವಾಸಪುರ ತಾಲೂಕು ಬಂದ್