ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕರಾವಳಿಯಲ್ಲಿ ಮಳೆ (Rain) ಹೆಚ್ಚಿರುವ ಹಿನ್ನಲೆ 5 ತಾಲೂಕಿನ ಶಾಲೆಗಳಿಗೆ (School) ಇಂದು (ಜು.17) ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ (Holiday) ಘೋಷಣೆ ಮಾಡಿದ್ದಾರೆ.
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಭಾರೀ ಮಳೆ ಹಿನ್ನೆಲೆ ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.