ಡೆಹ್ರಾಡೂನ್: ಭಾರೀ ಮಳೆ (Rain) ಸುರಿಯುತ್ತಿರುವ ಕಾರಣ ಉತ್ತರಾಖಂಡದ (Uttarakhand) ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ಕೇದಾರನಾಥ (Kedarnath) ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸೋನ್‌ಪ್ರಯಾಗ್ (Sonprayag) ಮತ್ತು ಗೌರಿಕುಂಡ್‌ನಲ್ಲಿ (Gourikund) ಪ್ರತಿಕೂಲ ಹವಾಮಾನ ಇರುವ ಕಾರಣ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಭಾರೀ ಮಳೆಯ ಪರಿಣಾಮ 4 ರಾಜ್ಯ ರಸ್ತೆ ಮತ್ತು 10 ಸಂಪರ್ಕ ರಸ್ತೆಗಳು ಮುಚ್ಚಿವೆ. ಅಲ್ಲದೇ ಧಾರಾಕಾರ ಮಳೆಯ ಪರಿಣಾಮ ಮಂದಾಕಿನಿ ಮತ್ತು ಅಲಕಾನಂದ ನದಿಗಳು ಉಕ್ಕಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಹಾರಾಟ ನಿಲ್ಲಿಸಿದ ʻತೇಜಸ್ʼ- 4 ತಿಂಗಳಲ್ಲಿ 7ನೇ ಚೀತಾ ಸಾವು!
Advertisement
Advertisement
ಭಾರೀ ಮಳೆ ಸುರಿಯುತ್ತಿರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD) ಉತ್ತರಾಖಂಡದಲ್ಲಿ ಜುಲೈ 12ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ ಈ ಕುರಿತು ಟ್ವಿಟ್ಟರ್‌ನಲ್ಲಿ ಟ್ವೀಟ್ ಕೂಡಾ ಮಾಡಿದೆ. ಮಂಗಳವಾರ ಉತ್ತರಾಖಂಡದ ಗಂಗ್ನಾನಿ ಬಳಿಯ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಶೇಷಗಳು ಬಿದ್ದು ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಭಾರತ ಇಡೀ ಜಗತ್ತಿಗೆ ಶಾಂತಿಯ ಸಂದೇಶ ಸಾರಬಲ್ಲದು – ವಿಶ್ವ ಮುಸ್ಲಿಂ ಲೀಗ್ ಮುಖ್ಯಸ್ಥ
Advertisement
ರಾಜ್ಯದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮದ ಕುರಿತು ಮಾತನಾಡಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಧಾಮಿ, ಪ್ರತಿವರ್ಷ ಇಲ್ಲಿ ಮಳೆಗಾಲದಲ್ಲಿ ಉಂಟಾಗುವ ಪ್ರಕೃತಿ ವಿಕೋಪಗಳನ್ನು ಎದುರಿಸಬೇಕಾಗುತ್ತದೆ. ಅತಿಯಾದ ಮಳೆಯಿಂದ ಭೂಕುಸಿತಗಳು ಉಂಟಾಗುತ್ತವೆ. ಅಲ್ಲದೇ ನದಿಗಳಲ್ಲಿ ನೀರಿನ ಮಟ್ಟವು ಹೆಚ್ಚಾಗುತ್ತದೆ. ನಾವು ಸಂಪೂರ್ಣ ಅಲರ್ಟ್ ಮೋಡ್‌ನಲ್ಲಿದ್ದು, ಎಲ್ಲಾ ಜಿಲ್ಲಾಡಳಿತ ಅಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ. ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ಅವರಿಗೆ ಅಲರ್ಟ್ ಮೋಡ್‌ನಲ್ಲಿರಲು ತಿಳಿಸಲಾಗಿದೆ ಎಂದರು. ಇದನ್ನೂ ಓದಿ: ಭಾರೀ ಮಳೆಗೆ ಹಿಮಾಚಲದಲ್ಲಿ 20 ಮಂದಿ ಬಲಿ – 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
Advertisement
ಅಲ್ಲದೇ ನಮ್ಮ ಇತರ ಸಂಸ್ಥೆಗಳು ಸಹ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಎನ್‌ಡಿಆರ್‌ಎಫ್, ಸೇನೆ ಮತ್ತು ನಮ್ಮ ಪಿಡಬ್ಲ್ಯೂಡಿ ಇಲಾಖೆಯು ಯಾವುದೇ ಪರಿಸ್ಥಿತಿ ಬಂದರೂ ಅದನ್ನು ಎದುರಿಸಲು ಸಿದ್ಧವಾಗಿದೆ. ಯಾವುದೇ ಪರಿಸ್ಥಿತಿಯಲ್ಲಾದರೂ ಜನರಿಗೆ ಸಹಾಯ ಮಾಡುವ ಸಲುವಾಗಿ ನಿರಂತರ ಜನರ ಸಂಪರ್ಕದಲ್ಲಿರುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Rain Alert: ಭಾರೀ ಮಳೆಗೆ ದೆಹಲಿ ತತ್ತರ – ನರ್ಸರಿಯಿಂದ 5ನೇ ತರಗತಿವರೆಗಿನ ಶಾಲೆಗಳಿಗೆ ರಜೆ
Web Stories