ಡೆಹ್ರಾಡೂನ್: ಉತ್ತರಾಖಂಡದಲ್ಲಿ (Uttarakhand) ಭಾರೀ ಮಳೆಯಾಗುತ್ತಿದ್ದು, ಮಳೆಯ (Rain) ಪರಿಣಾಮ ಋಷಿಕೇಶದ (Rishikesh) ಧಲ್ವಾಲ (Dhalwala) ಮತ್ತು ಖಾರಾ (Khara) ಪ್ರದೇಶಗಳು ಜಲಾವೃತವಾಗಿದೆ.
ಬುಧವಾರ ರಾತ್ರಿ ಸುರಿದ ತೀವ್ರ ಮಳೆಯ ಪರಿಣಾಮ ಅನೇಕ ಮನೆಗಳು ಮುಳುಗಡೆಯಾಗಿದ್ದು, ಧಲ್ವಾಲ ಮತ್ತು ಖಾರದಲ್ಲಿ ನೀರಿನಲ್ಲಿ ಮುಳುಗಿರುವ ಮನೆಗಳಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು (SDRF) ಕರೆಸಲಾಗಿದೆ. ಇದನ್ನೂ ಓದಿ: ನಾವು ಕಾಶ್ಮೀರಿಗಳೊಂದಿಗೆ ಮಾತನಾಡುತ್ತೇವೆ ಹೊರತು ಪಾಕಿಸ್ತಾನಿಗಳೊಂದಿಗಲ್ಲ: ಅಮಿತ್ ಶಾ
Advertisement
Advertisement
ಎಸ್‌ಡಿಆರ್‌ಎಫ್ ತಂಡ ರಾತ್ರಿಯೇ ಸ್ಥಳಕ್ಕೆ ಆಗಮಿಸಿ ಮುಳುಗಿದ್ದ ಮನೆಗಳಿಂದ ಸುಮಾರು 50 ಜನರನ್ನು ರಕ್ಷಿಸಿ ತೆಪ್ಪದ ಮೂಲಕ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಋಷಿಕೇಶ ಪ್ರದೇಶದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಜನರ ಮನೆಗಳಿಗೆ ನೀರು ನುಗ್ಗಿದ್ದು, ಮನೆಯೊಳಗೆ ಸಿಲುಕಿದವರ ರಕ್ಷಣೆಗೆ ಎಸ್‌ಡಿಆರ್‌ಎಫ್ ತಂಡದ ಅಗತ್ಯವಿದೆ ಎಂದು ಎಸ್‌ಡಿಆರ್‌ಎಫ್‌ಗೆ ಮನವಿ ಮಾಡಿದ ಹಿನ್ನೆಲೆ ಎಸ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯ ಕೈಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಣಿಪುರದಲ್ಲಿ ಭಾರತವನ್ನ, ಭಾರತ ಮಾತೆಯನ್ನ ಹತ್ಯೆ ಮಾಡಿದೆ: ಮೋದಿ ವಿರುದ್ಧ ರಾಹುಲ್ ಕಿಡಿ
Advertisement
ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಬುಧವಾರ ತಿಳಿಸಿದ್ದಾರೆ. ಅಲ್ಲದೇ ಚಾರ್‌ಧಾಮ್ ಯಾತ್ರಾರ್ಥಿಗಳು ಹವಾಮಾನದ ಬಗ್ಗೆ ಮಾಹಿತಿಯನ್ನು ಪಡೆದ ಬಳಿಕ ಪ್ರಯಾಣವನ್ನು ಮುಂದುವರಿಸಲು ಸಲಹೆ ನೀಡಿದರು. ಇದನ್ನೂ ಓದಿ: 4ರ ಬಾಲಕಿ ಮೇಲೆ ಅತ್ಯಾಚಾರ: ಇದು ಮಾನವೀಯತೆ ಮೀರಿದ ಕ್ರೌರ್ಯ, ಕಾಮುಕರಿಗೆ ಕ್ಷಮೆಯಿಲ್ಲವೆಂದ ಸಚಿನ್ ಪೈಲಟ್
Advertisement
ಭಾರೀ ಮಳೆಯ ಪರಿಣಾಮ ಕಳೆದ 24 ಗಂಟೆಗಳಲ್ಲಿ ಪ್ರತ್ಯೇಕ ಘಟನೆಗಳಲ್ಲಿ 9 ಮಂದಿ ಸಾವನ್ನಪಿದ್ದು, ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದರಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Web Stories