ಮಡಿಕೇರಿ: ರಾಜ್ಯದಲ್ಲಿ ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕಾವೇರಿಯ (Cauvery) ತವರು ಕೊಡಗು ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ(Heavy Rain) ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಭಾಗಮಂಡಲ ಹಾಗೂ ಬ್ರಹ್ಮಗಿರಿ ತಪ್ಪಲಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಣಾಮವಾಗಿ ಪವಿತ್ರ ತ್ರಿವೇಣಿ ಸಂಗಮ(Triveni Sangam) ಹಾಗೂ ಸಮೀಪದ ಉದ್ಯಾನವನ ಈ ಋತುವಿನಲ್ಲಿ ಮೂರನೇ ಬಾರಿಗೆ ಸಂಪೂರ್ಣ ಮುಳುಗಡೆಯಾಗಿದೆ.

ಹಾರಂಗಿ ಜಲಾನಯನ(Harangi Dam) ಪ್ರದೇಶದಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಸೋಮವಾರ ರಾತ್ರಿಯಿಂದಲೇ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆ ಮುಂದುವರಿದಿದೆ. ಮಳೆಯ ಆರ್ಭಟ ಮುಂದುವರಿದಿರುವುದರಿಂದ ನದಿ ಪಾತ್ರದ ಜನರು ಹಾಗೂ ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯ ಆಡಳಿತ ಸೂಚಿಸಿದೆ. ಇದನ್ನೂ ಓದಿ: ನಿಮ್ಮ ಹೆಸರಲ್ಲೇ ಇದೆಯಾ ನೀವು ಬಳಸುವ ಸಿಮ್? SIM Swap ವಂಚನೆ ಬಗ್ಗೆ ಇರಲಿ ಎಚ್ಚರ
