ಬೆಂಗಳೂರು: ರಾಜ್ಯಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ಬೆಂಗಳೂರು, ಬೀದರ್, ತುಮಕೂರು, ಮಡಿಕೇರಿ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಮೋಸ ಮುಸಕಿದ ವಾತಾವರಣದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗಿದೆ. ನಗರದ ಹೊರವಲಯ ನೆಲಮಂಗಲ ಸುತ್ತಮುತ್ತ ಬಿರುಗಾಳಿ ಸಹಿತ ಮಳೆಯಾಗಿದ್ದು, ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡುವಂತಾಯಿತು. ಆನೇಕಲ್ ತಾಲೂಕಿನಲ್ಲಿಯೂ ಮಳೆರಾಯ ಕೃಪೆ ತೋರಿದ್ದು, ಅತ್ತಿಬೆಲೆ, ಚಂದಾಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.
Advertisement
Advertisement
ಇತ್ತ ಬಿಸಿಲಿನಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯಲ್ಲಿಯೂ ಆಲಿಕಲ್ಲು ಸಹಿತ ಮಳೆಯಾಗಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತವಾರಣವಿದ್ದು, ರೈತನ ಮೊಗದಲ್ಲಿ ಮಂದಾಹಾಸ ಮೂಡುವಂತೆ ಮಾಡಿದೆ. ತುಮಕೂರು ಜಿಲ್ಲೆಯಲ್ಲಿ ಸಿಡಿಲಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕಲಬುರಗಿ ಭಾರೀ ಬಿರುಗಾಳಿ ಬೀಸುತ್ತಿದ್ದು, ಜನರು ಮನೆಯಿಂದ ಹೊರಗಡೆ ಬರಲು ಹಿಂದೇಟು ಹಾಕುತ್ತಿದ್ದಾರೆ.
Advertisement
ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಕೊಡಗು ಜಿಲ್ಲೆಯ ಮಡಿಕೇರಿ, ಗೋಣಿಕೊಪ್ಪ, ಸೋಮವಾರಪೇಟೆ, ವಿರಾಜಪೇಟೆ, ಕುಟ್ಟ, ಶನಿವಾರಸಂತೆ, ಮೂರ್ನಾಡು ಸೇರಿದಂತೆ ಹಲವೆಡೆ ಮಳೆ ಮುಂದುವರೆದಿದ್ದು, ರೈತರು ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಿದ್ದಾರೆ.
Advertisement