ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚುವುದಾಗಿ ಅಧಿಕಾರಿಗಳು ಘೋಷಿಸಿದ್ದಾರೆ.
ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯು ಭಾರೀ ಮಳೆ ಮುನ್ಸೂಚನೆ ಕೊಟ್ಟಿದೆ. ತಮಿಳುನಾಡಿನ 11 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಸಿಕ್ಕಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
- Advertisement
ಡಿಸೆಂಬರ್ 16 ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.
- Advertisement
ತಮಿಳುನಾಡಿನ ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಂಜಾವೂರು, ತಿರುವರೂರು ಮತ್ತು ಪುದುಕ್ಕೊಟ್ಟೈ ಸೇರಿದಂತೆ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಗಂಗಾ, ರಾಮನಾಥಪುರಂ, ತಿರುಚಿರಾಪಳ್ಳಿ, ಪೆರಂಬಲೂರು, ಅರಿಯಲೂರ್, ಕಲ್ಲಕುರಿಚಿ, ವಿಲ್ಲುಪ್ಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ಚೆನ್ನೈ ಮತ್ತು ತಿರುವಳ್ಳೂರಿನ ಪ್ರತ್ಯೇಕ ಪ್ರದೇಶಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಡಿ.16 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಕೇರಳದಲ್ಲಿ ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಹೆಚ್ಚುವರಿಯಾಗಿ, ಪತ್ತನಂತಿಟ್ಟ, ಕೊಟ್ಟಾಯಂ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್‌ನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಡಿ.13 ರಂದು ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಕರ್ನಾಟಕ: ದಕ್ಷಿಣ ಒಳನಾಡಿನಲ್ಲಿ ಡಿ.13 ರಂದು ಭಾರೀ ಮಳೆಯಾಗಬಹುದು. ಕರಾವಳಿ ಕರ್ನಾಟಕದಲ್ಲಿ ಡಿ.13 ರಂದು ತೀವ್ರ ಮಳೆಯಾಗುವ ನಿರೀಕ್ಷೆಯಿದೆ.