ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಪಬ್ಲಿಕ್ ಟಿವಿಗೆ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಎಸ್ ಆರ್ ಪಾಟೀಲ್ ಪ್ರತಿಕ್ರಿಯಿಸಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಕೂಡ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
Advertisement
ಬೆಂಗಳೂರಿನಲ್ಲಿ ಕೂಡ ಎರಡು ದಿನಗಳ ಕಾಲ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ಅಯಾ ಜಿಲ್ಲೆಗಳಿಗೆ ಎಚ್ಚರಿಕೆ ಸೂಚನೆ ನೀಡಲಾಗಿದೆ ಎಂದು ಎಸ್.ಆರ್ ಪಾಟೀಲ್ ಮಾಹಿತಿ ನೀಡಿದರು.
Advertisement
ಕಳೆದ ವಾರದಿಂದ ಬೆಂಗಳೂರಿನಲ್ಲಿ ಆರಂಭಗೊಂಡಿರುವ ಮಳೆ ಗುರುವಾರ ಮಧ್ಯಾಹ್ನ ಜೋರಾಗಿ ಸುರಿದಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv