– ಜೂ.1 ರಂದ ರಾಜ್ಯಕ್ಕೆ ಮುಂಗಾರು ಪ್ರವೇಶ
ಧಾರವಾಡ: ಮುಂಗಾರು ಮಳೆ (Rain) ಮುಂದಿನ ಮೂರು ದಿನಗಳಲ್ಲಿ ಕೇರಳಕ್ಕೆ ತಲುಪುವ ಸಾದ್ಯತೆ ಇದೆ. ಜೂ.1 ಕ್ಕೆ ಮುಂಗಾರು ಕರ್ನಾಟಕ ರಾಜ್ಯಕ್ಕೆ ಎಂಟ್ರಿ ಕೊಡುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ, ಹವಾಮಾನ ಇಲಾಖೆ ವರದಿ ಮಾಡಿದೆ.
ಇವತ್ತಿಂದ ಮೂರು ದಿನ ರಾಜ್ಯದ ಉತ್ತರ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕಳೆದ ರಾತ್ರಿಯಿಂದ ಗುಡುಗು ಸಹಿತ ಮಳೆ ಆರಂಭವಾಗಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಿದೆ. ಇನ್ನೂ ಮೂರು ದಿನ ಮುಂದುವರೆಯುವ ಸಾದ್ಯತೆ ಇದ್ದು, ಕೃಷಿ ಚಟುವಟಿಕೆ ಮಾಡುವ ರೈತರು ಜಾಗೃತಿ ವಹಿಸುವಂತೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಮಳೆ | ಇಂದು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 24ರಂದು ಗುಡುಗು, ಮಿಂಚು, ಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊ೦ಡ ಪರಿಣಾಮ ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಧಾರಾಕಾರ ಮಳೆ – ಮಂತ್ರಾಲಯದಲ್ಲಿ ಕಲ್ಯಾಣ ಮಂಟಪ ತೆರೆದು ಭಕ್ತರಿಗೆ ವಸತಿ
