ಮುಂದಿನ 3 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

Public TV
1 Min Read
Weather

– ಕೆಲ ಜಿಲ್ಲೆಗಳಲ್ಲಿ ಜೂ.23ರವರೆಗೆ ಸಾಧಾರಣ ಮಳೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊಂಚ ಬಿಡುವು ನೀಡಿದ್ದ ವರುಣ ಇಂದು ಮತ್ತೆ ಅಬ್ಬರಿಸಿದ್ದಾನೆ. ಸಂಜೆಯ ವೇಳೆಗೆ ಬೆಂಗಳೂರಿನ ಹಲವೆಡೆ ಭಾರೀ ಮಳೆಯಾಗಿದ್ದು, ಮುಂದಿನ 3 ಗಂಟೆಗಳ ಕಾಲ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಶೀಘ್ರದಲ್ಲೇ 8,000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ – ಜಿ.ಪರಮೇಶ್ವರ್

ಇನ್ನು ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜೂನ್ 23ರವರೆಗೆ ಸಾಧಾರಣ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿಯೂ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಪೆರ್ಡೂರು ಅನಂತಪದ್ಮನಾಭನಿಗೆ ಮುಷ್ಟಿ ಕಾಣಿಕೆ ಅರ್ಪಿಸಿದ ರಕ್ಷಿತ್ ಶೆಟ್ಟಿ

ಇಂದು ಸಂಜೆಯ ವೇಳೆಗೆ ಬೆಂಗಳೂರಿನ ಅಲ್ಲಲ್ಲಿ ಭಾರೀ ಮಳೆಯಾಗಿದೆ. ಬಿಇಎಲ್, ವಿದ್ಯಾರಣ್ಯಪುರ, ಜಾಲಹಳ್ಳಿ ಕ್ರಾಸ್, ಗೊರಗುಂಟೆ ಪಾಳ್ಯ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಹೆಬ್ಬಾಳ ಪೀಣ್ಯ ಹಾಗೂ ಮಲ್ಲೇಶ್ವರಂ ಸುತ್ತಮುತ್ತ ಜೋರು ಮಳೆಯಾಗಿದೆ. ಇದನ್ನೂ ಓದಿ: Honeymoon Murder | ರಾಜ್‌ನ ಆಭರಣ, 5 ಲಕ್ಷ ನಗದು, ಪಿಸ್ತೂಲ್ ಇದ್ದ ಹಂತಕಿಯ ಬ್ಯಾಗ್ ಮುಚ್ಚಿಟ್ಟಿದ್ದ ಫ್ಲ್ಯಾಟ್‌ ಓನರ್ ಅರೆಸ್ಟ್

Share This Article