ಮಂಗಳೂರು: ಲಾರಿ ಪಲ್ಟಿಯಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಮತ್ತೊಮ್ಮೆ ಟ್ರಾಫಿಕ್ ಜಾಮ್ ಉಂಟಾಗಿದೆ.
ಇಂದು ಮುಂಜಾನೆ ಘಾಟ್ ನ 6ನೇ ತಿರುವಿನಲ್ಲಿ ಲಾರಿಯೊಂದು ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡಿದ್ದಾರೆ.
Advertisement
ಘಾಟ್ ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ ಎನ್ನಲಾಗಿದೆ. ಪರಿಣಾಮ ವಾಹನಗಳು ಕಿಲೋಮೀಟರ್ ಗಟ್ಟಲೆ ನಿಂತಿದ್ದವು. ಒಟ್ಟಿನಲ್ಲಿ ಇತ್ತೀಚೆಗಷ್ಟೇ ಶಿರಾಡಿ ಘಾಟ್ ನಲ್ಲು ಗುಡ್ಡ ಕುಸಿತವಾದ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಪರಿಣಾಮ ಎಲ್ಲಾ ವಾಹನಗಳು ಚಾರ್ಮಾಡಿ ಘಾಟ್ ಆಗಿಯೇ ಸಂಚರಿಸುತ್ತಿದ್ದವು. ಹೀಗಾಗಿ ಹಲವು ದಿನ ವಾಹನ ಸವಾರರು ಹಾಗೂ ಪ್ರಯಾಣಿಕರು ಪರದಾಟ ಅನುಭವಿಸಿದ್ದರು. ಇದನ್ನೂ ಓದಿ: ಸೆಪ್ಟೆಂಬರ್ ನಲ್ಲೇ ಹರಿವು ನಿಲ್ಲಿಸಿದ ಚಾರ್ಮಾಡಿಯ ಫಾಲ್ಸ್ ಗಳು!
Advertisement
Advertisement
ಸದ್ಯ ಶಿರಾಡಿ ಘಾಟ್ ಲಘು ವಾಹನಕ್ಕೆ ಮುಕ್ತವಾಗಿದ್ದು, ಇದರಿಂದ ಚಾರ್ಮಾಡಿ ಘಾಟ್ ಟ್ರಾಫಿಕ್ ಸಮಸ್ಯೆಯಿಂದ ಮುಕ್ತಿ ಪಡೆದಿದೆ. ಇದನ್ನೂ ಓದಿ: ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಚಾರ್ಮಾಡಿ ಘಾಟ್
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv