ಮಂಗಳೂರು: ಬೆಂಗಳೂರು- ಮಂಗಳೂರು ನಡುವೆ ಏಕೈಕ ಸಂಪರ್ಕದ ಕೊಂಡಿಯಾಗಿದ್ದ ಚಾರ್ಮಾಡಿ ಘಾಟಿಯಲ್ಲಿ 10ನೇ ತಿರುವಿನಲ್ಲಿ ಕಂಟೈನರ್ ಟ್ರಕ್ ಪಲ್ಟಿಯಾಗಿದೆ.
ಪಲ್ಟಿಯಾದ ಹಿನ್ನೆಲೆಯಲ್ಲಿ ರಸ್ತೆಯ ಒಂದು ಬದಿಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಟ್ಯಾಂಕರ್ ಮತ್ತಿತರ ಘನ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಲಾಗಿದ್ದು. ಚಾರ್ಮಾಡಿ ಘಾಟ್ ಉದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಳ್ತಂಗಡಿ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
Advertisement
ಸಂಪಾಜೆ, ಶಿರಾಡಿಘಾಟ್ ಬಂದ್ ಆಗಿರೋ ಹಿನ್ನೆಲೆ ಸಾವಿರಾರು ವಾಹನಗಳು ಚಾರ್ಮಾಡಿಘಾಟಿಯಲ್ಲಿ ಸಂಚರಿಸುತ್ತಿರುವುದರಿಂದ ವಾಹನಗಳ ದಟ್ಟಣೆ ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಸಂಭವಿಸುತ್ತಿದ್ದು, ಈಗ ಕಂಟೈನರ್ ಉರುಳಿ ಬಿದ್ದ ಕಾರಣ ಮತ್ತೆ ಸಮಸ್ಯೆಯಾಗಿದೆ.
Advertisement
Advertisement
ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್, ಆರಂಭದಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಗಡಿ ಮುಟ್ಟುವವರೆಗೂ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಮಧ್ಯೆ ದೊಡ್ಡ ಗಾಡಿಗಳ ಸಂಚಾರ ಕೂಡ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ತೊಂದೊಡ್ಡುತ್ತಿವೆ. ನಾಲ್ಕೈದು ಕಿಮೀ ಗಟ್ಟಲೇ ವಾಹನಗಳು ನಿಂತಲ್ಲೇ ನಿಂತಿರುವಂತಹ ಸ್ಥಿತಿ ನಿರ್ಮಾಣವಾಗಿದೆ.
Advertisement
ಜೊತೆಗೆ ಮಳೆ, ಗಾಳಿ, ದಟ್ಟವಾದ ಮಂಜಿನಿಂದ ಪ್ರಯಾಣಿಕರು ಕಂಗಾಲಾಗಿದ್ದು, ವಾಹನಗಳ ಮಂದಗತಿಯ ಸಂಚಾರದಿಂದ ಮೊದಲು ಬೆಳ್ತಂಗಡಿಯ ಗಡಿ ಮುಟ್ಟಿದರೆ ಸಾಕೆಂದು ಆತಂಕದಿಂದಲೇ ಸಂಚರಿಸುತ್ತಿದ್ದಾರೆ.ಇದನ್ನೂ ಓದಿ: ಕೊಡಗು ಸಂತ್ರಸ್ತರಿಗೆ ಸಹಾಯ ಮಾಡಿ- ಏನು ಕೊಡಬಹುದು? ಯಾರನ್ನು ಸಂಪರ್ಕಿಸಬಹುದು? ಇಲ್ಲಿದೆ ವಿವರ
ಶಿರಾಡಿ ಘಾಟ್ ನಲ್ಲಿ ಆಗಸ್ಟ್ 20 ರವರೆಗೆ ಲಘು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಮಡಿಕೇರಿ ಮಂಗಳೂರು ಸಂಪರ್ಕ ಕಲ್ಪಿಸುವ ಮಡಿಕೇರಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿರುವ ಕಾರಣ ಸಂಚಾರವನ್ನು ಬಂದ್ ಮಾಡಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv