ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕ್ನನಡ, ಧಾರವಾಡ, ಗದಗ, ಬೆಳಗಾವಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ಮೈಸೂರು , ಚಾಮರಾಜನಗರ, ಮುಂಡ್ಯ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆ ಮಳೆಯಾಗುವ ಸಾಧ್ಯತೆಗಳಿವೆ.
Advertisement
Advertisement
40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಹೀಗಾಗಿ ರಾಜ್ಯದ ಹಲವು ಕಡೆ ಮಳೆಯ ಮುನ್ನೆಚ್ಚರಿಕೆಯನ್ನು ಇಲಾಖೆ ನೀಡಿದೆ. ಇದನ್ನೂ ಓದಿ: ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ವಾಹನದಲ್ಲಿತ್ತು 7 ಕೋಟಿ ರೂ.!
Advertisement
ರಾಜ್ಯದ ಹಲವು ಕಡೆಗಳಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಮಂಗಳೂರು, ಹಾಸನ, ಚಾಮರಾಜನಗರ , ಧಾರವಾಡ, ಚಿಕ್ಕಮಗಳೂರು, ಹಾವೇರಿ ಹಾಗೂ ಹುಬ್ಬಳ್ಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರೈತರು ಸಂತಸಗೊಂಡಿದ್ದಾರೆ.