ಚಿಕ್ಕಮಗಳೂರು: ಕುದುರೆಮುಖ (Kudremukh) ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ (Rain) ಭದ್ರಾ ನದಿ (Bhadra River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಭದ್ರಾ ನದಿ ಅಬ್ಬರಕ್ಕೆ ಹೆಬ್ಬಾಳೆ ಸೇತುವೆ ಮುಡುಗಡೆಯಾಗಿದೆ. ಮಳೆಗಾಲದಲ್ಲಿ ಮೊದಲ ಬಾರಿಗೆ ಕಳಸ ತಾಲೂಕಿನ ಹೊರನಾಡು ಬಳಿ ಇರುವ ಹೆಬ್ಬಾಳೆ ಸೇತುವೆ (Hebbale Bridge) ಮುಳುಗಡೆಯಾಗಿದೆ.
Advertisement
Advertisement
ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ. ಕಳೆದ ರಾತ್ರಿಯಿಂದಲೂ ಸೇತುವೆಯ ಮೇಲೆ ಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಇದನ್ನೂ ಓದಿ: Valmiki Scam | ಕೋಟ್ಯಂತರ ರೂ. ಬೆಲೆ ಬಾಳುವ ಐಷಾರಾಮಿ ಕಾರು ವಶಕ್ಕೆ
Advertisement
ಮುನ್ನೆಚ್ಚರಿಕಾ ಕಾರ್ಯಕ್ರಮವಾಗಿ ಸೇತುವೆಯ ಎರಡು ಕಡೆ ಬ್ಯಾರಿಕೇಡ್ ಹಾಕಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಸೇತುವೆ ಬಳಿ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.
Advertisement
ಕುಸಿದ ಕಾಪೌಂಡ್: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಮಳೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಾಪೌಂಡ್ ಕುಸಿದು ಬಿದ್ದಿದೆ. ಸೋಮವಾರ ಸಂಜೆಯ ಧಾರಾಕಾರ ಮಳೆಗೆ ಕಾಪೌಂಡ್ ಕುಸಿದಿದೆ.