ಗಾಂಧೀನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತಾಯಿಯ ಭೇಟಿಗೆ ಮೋದಿ ತುರ್ತಾಗಿ ಅಹಮದಾಬಾದ್ ತೆರಳಿದ್ದಾರೆ.
ಈ ವರ್ಷ ಜೂನ್ನಲ್ಲಿ 99 ವರ್ಷ ಪೂರೈಸಿರುವ ಹೀರಾಬೆನ್ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆ ಅವರನ್ನು ಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಇದೀಗ ಸ್ಥಿರವಾಗಿದೆ ಎಂದು ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್ ತಿಳಿಸಿದೆ. ಉಳಿದಂತೆ ಆಸ್ಪತ್ರೆ ಯಾವುದೇ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿಲ್ಲ.
Advertisement
Advertisement
ಈ ಹಿಂದೆ ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಬಳಿಕ ಪ್ರಧಾನಿ ಮೋದಿ ತಮ್ಮ ತಾಯಿಯನ್ನು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಇದನ್ನೂ ಓದಿ: ಮತ್ತೆ ಟೆಸ್ಟಿಂಗ್ ಎಡವಟ್ಟು- ಕೋವಿಡ್ ಟೆಸ್ಟ್ ಮಾಡಿಸದಿದ್ರೂ ಬಂತು ಮೆಸೇಜ್
Advertisement
Advertisement
ನಿನ್ನೆ ಮೈಸೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
ಪ್ರಹ್ಲಾದ್ ಮೋದಿ ಅವರನ್ನು ತಮ್ಮ ಕುಟುಂಬದೊಂದಿಗೆ ಚಿಕಿತ್ಸೆಗಾಗಿ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಸುರಕ್ಷಿತರಾಗಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು