ಡೆಹ್ರಾಡೂನ್: ದುರಸ್ತಿಗಾಗಿ ಎತ್ತಿಕೊಂಡು ಸಾಗುತ್ತಿದ್ದಾಗ ಖಾಸಗಿ ಹೆಲಿಕಾಪ್ಟರ್ (Private Helicopter) ಪತನಗೊಂಡ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ (Uttarakhand Kedarnath) ನಡೆದಿದೆ.
ಈ ಹಿಂದೆ ಉತ್ತರಾಖಂಡದ ಕೇದಾರನಾಥ ಧಾಮದಲ್ಲಿ ಲ್ಯಾಂಡಿಂಗ್ ಸಮಯದಲ್ಲಿ ಹಾನಿಗೊಳಗಾದ ಹೆಲಿಕಾಪ್ಟರ್ ಅನ್ನು ವಾಯುಸೇನೆಯ MI-17 ಹೆಲಿಕಾಪ್ಟರ್ ಎತ್ತಿಕೊಂಡು ಸಾಗುತ್ತಿತ್ತು. ಈ ವೇಳೆ ಹೆಲಿಕಾಪ್ಟರ್ ಜಾರಿ ಬಿದ್ದು ಮಂದಾಕಿನಿ ನದಿಯ (Mandakini River) ಬಳಿ ಪತನಗೊಂಡಿದೆ.
Advertisement
VIDEO | Uttarakhand: A defective helicopter, which was being air lifted from #Kedarnath by another chopper, accidentally fell from mid-air as the towing rope snapped, earlier today.#UttarakhandNews
(Source: Third Party) pic.twitter.com/yYo9nCXRIw
— Press Trust of India (@PTI_News) August 31, 2024
Advertisement
ಅಪಘಾತದಲ್ಲಿ ಯಾರಾದರೂ ಗಾಯಗೊಂಡಿದ್ದಾರೆಯೇ ಎಂಬುದು ತಕ್ಷಣ ತಿಳಿದು ಬಂದಿಲ್ಲ. ಹೆಲಿಕಾಪ್ಟರ್ ಪತನಗೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Advertisement
ಭಾರೀ ಮಳೆಯಿಂದಾಗಿ ಖಾಸಗಿ ಕಂಪನಿ ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್ ಹಾಳಾಗಿತ್ತು. ಈ ಹೆಲಿಕಾಪ್ಟರ್ ಅನ್ನು ದುರಸ್ತಿಗಾಗಿ ವಾಯುಸೇನೆಯ ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಿ ತೆಗೆದುಕೊಂಡು ಹೋಗಲಾಗುತ್ತಿತ್ತು.
Advertisement
ಆಗಸ್ಟ್‌ನಲ್ಲಿ ಚಾರಣ ಮಾರ್ಗವನ್ನು ಹೆಚ್ಚಾಗಿ ಸ್ಥಗಿತಗೊಳಿಸಲಾಗಿದ್ದರೂ, ಯಾತ್ರಾರ್ಥಿಗಳು ಹೆಲಿಕಾಪ್ಟರ್‌ಗಳಲ್ಲಿ ಹಿಮಾಲಯ ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.