ಡೆಹ್ರಾಡೂನ್: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ ಹೊತ್ತೊಯ್ಯುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಮೃತರನ್ನು ಪೈಲಟ್ ರಾಜ್ ಪಾಲ್, ಸಹ ಪೈಲಟ್ ಕಪ್ತಾಲ್ ಲಾಲ್ ಹಾಗೂ ಸ್ಥಳೀಯರಾದ ರಮೇಶ್ ಸವಾರ್ ಎಂದು ಗುರುತಿಸಲಾಗಿದೆ. ಈ ಘಟನೆ ಬುಧವಾರ ಮಧ್ಯಾಹ್ನ ಉತ್ತರಾಖಂಡ್‍ನ ಉತ್ತರ ಕಾಶಿಯಲ್ಲಿ ನಡೆದಿದೆ.
Advertisement
Uttarkashi: Search & rescue operation by SDRF, NDRF, ITBP & Police continue in Mori tehsil following cloud-burst. #Uttarakhand pic.twitter.com/rKmEQC3hN5
— ANI (@ANI) August 21, 2019
Advertisement
ಉತ್ತರಕಾಶಿಯಲ್ಲಿ ಹೆಲಿಕಾಪ್ಟರ್ ಪತನವಾಗಿದೆ. ಇದು ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಆಹಾರ ಸಾಮಾಗ್ರಿಗಳನ್ನು ಕೊಂಡೊಯ್ಯುತ್ತಿತ್ತು ಎಂದು ಅಲ್ಲಿನ ಜಿಲ್ಲಾ ಮ್ಯಾಜಿಸ್ಟ್ರೇಟರ್ ಮಾಹಿತಿ ನೀಡಿದ್ದಾರೆ.
Advertisement
ಹೆಲಿಕಾಪ್ಟರ್ ಉತ್ತರ ಕಾಶಿ ಜಿಲ್ಲೆಯ ಮೊರಿಯಿಂದ ಮೊಲ್ದಿ ಕಡೆ ಹಾರುತ್ತಿತ್ತು. ಈ ವೇಳೆ ವಿದ್ಯುತ್ ತಂತಿ ತಗುಲಿ ಪತನಗೊಂಡಿದೆ. ಹೆಲಿಕಾಪ್ಟರ್ ಪತನವಾದ ಮಾಹಿತಿ ತಿಳಿಯುತ್ತಿದ್ದಂತೆಯೇ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸರು(ಐಟಿಬಿಪಿ) ಘಟನಾ ಸ್ಥಳಕ್ಕೆ ದೌಡಾಯಿಸಿ, ಮೃತದೇಹಗಳನ್ನು ಪಡೆದುಕೊಂಡಿದ್ದಾರೆ.
Advertisement
ಸದ್ಯ ಮೃತರ ಕುಟುಂಬಕ್ಕೆ ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು 15 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಉತ್ತರ ಕಾಶಿಯಲ್ಲಿ ಉಂಟಾದ ಪ್ರವಾಹದಲ್ಲಿ ಇಲ್ಲಿಯವರೆಗೆ ಸರಿ ಸುಮಾರು 16 ಮಂದಿ ಸಾವಿಗೀಡಾಗಿದ್ದಾರೆ.
Uttarakhand CM, Trivendra Singh Rawat announces a compensation of Rs 15 lakh for the next of kin of the persons who have lost their lives in the helicopter crash in Uttarkashi District. https://t.co/Hc5OsqD9Jj
— ANI (@ANI) August 21, 2019