ರವಿ ಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

ಚೆನ್ನೈ: ಆರ್ಟ್ ಆಫ್ ಲಿವಿಂಗ್ (Art of Living) ಮುಖ್ಯಸ್ಥ ಶ್ರೀ ರವಿ ಶಂಕರ್ (Sri Ravi Shankar) ಗುರೂಜಿ ಇದ್ದ ಹೆಲಿಕಾಪ್ಟರ್ (Helicopter) ಹವಾಮಾನ ವೈಪರೀತ್ಯದಿಂದಾಗಿ ತಮಿಳುನಾಡಿನ (Tamil Nadu) ಈರೋಡ್‍ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ರವಿ ಶಂಕರ್ ಗುರೂಜಿ ಹಾಗೂ ಇತರ ಮೂವರಿದ್ದ ಹೆಲಿಕಾಪ್ಟರ್ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ (STR) ಬುಡಕಟ್ಟು ಕುಗ್ರಾಮ ಉಕಿನಿಯಂನಲ್ಲಿ ಬುಧವಾರ ತುರ್ತು ಭೂಸ್ಪರ್ಶ (Emergency Landing) ಮಾಡಿದೆ. ಹವಾಮಾನ ವೈಪರೀತ್ಯದಿಂದಾಗಿ ಪೈಲಟ್ ಹೆಲಿಕಾಪ್ಟರ್ ಅನ್ನು ಸೇಫ್ ಆಗಿ ಲ್ಯಾಂಡ್ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ಸಾಕ್ಷ್ಯಚಿತ್ರಕ್ಕೆ ವಿರೋಧ – ಟೀಕೆಗೆ ಗುರಿಯಾಗಿದ್ದ ಎ.ಕೆ.ಆ್ಯಂಟನಿ ಪುತ್ರ ಕಾಂಗ್ರೆಸ್‌ಗೆ ರಾಜೀನಾಮೆ
https://twitter.com/imrajni_singh/status/1618145923066138626
ಹೆಲಿಕಾಪ್ಟರ್‌ನಲ್ಲಿ ಗುರೂಜಿ ಜೊತೆ ಇಬ್ಬರು ಆಪ್ತ ಸಹಾಯಕರು ಮತ್ತು ಒಬ್ಬ ಪೈಲಟ್ ಪ್ರಯಾಣಿಸುತ್ತಿದ್ದರು. ತಿರುಪುರದಿಂದ ಗುರೂಜಿ ಬೆಂಗಳೂರಿಗೆ ಖಾಸಗಿ ಹೆಲಿಕಾಪ್ಟರ್‌ನಲ್ಲಿ 10:30ರ ಸುಮಾರಿಗೆ ಹಾರಾಟ ಆರಂಭಿಸಿ ಕೆಲ ಹೊತ್ತಿನಲ್ಲೇ ಹವಾಮಾನ ವೈಪರೀತ್ಯದಿಂದ ಪೈಲಟ್ ಹೆಲಿಕಾಪ್ಟರ್‌ನ್ನು ಉಕಿನಿಯಂನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ ಎಂದು ಕಡಂಬೂರು ಪೊಲೀಸ್ ಇನ್ಸ್‌ಪೆಕ್ಟರ್ ಸಿ.ವಡಿವೇಲ್ ಕುಮಾರ್ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ 2020ರ ಬಳಿಕ ಮೊದಲ ಬಾರಿಗೆ ಶೂನ್ಯ ಕೊರೊನಾ ಕೇಸ್
Live Tv
Join our Whatsapp group by clicking the below link
https://chat.whatsapp.com/E6YVEDajTzH06LOh77r25k