ಛತ್ತೀಸ್‍ಗಢದಲ್ಲಿ ಹೆಲಿಕಾಪ್ಟರ್ ಪತನ- ಇಬ್ಬರು ಸಾವು

Public TV
1 Min Read
helicopter crash airport chhattisgarhs

ರಾಯ್ಪುರ್: ಹೆಲಿಕಾಪ್ಟರ್ ಪತನಗೊಂಡು ಇಬ್ಬರು ಪೈಲೆಟ್ ಸಾವನ್ನಪ್ಪಿದ ಘಟನೆ ಛತ್ತೀಸ್‍ಗಢದ ರಾಯ್ಪುರ್‌ದ ವಿಮಾನ ನಿಲ್ದಾಣದಲ್ಲಿ ನಡೆದಿದೆ.

ಘಟನೆಯಲ್ಲಿ ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಾಂಡಾ ಮತ್ತು ಕ್ಯಾಪ್ಟನ್ ಎಪಿ ಶ್ರೀವಾಸ್ತವ ಸಾವನ್ನಪ್ಪಿದ್ದಾರೆ. ಪೈಲಟ್‍ಗಳು ಹೆಲಿಕಾಪ್ಟರ್ ಇಳಿಸಲು ಯತ್ನಿಸಿದ ಸಂದರ್ಭದಲ್ಲಿ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದಾಗಿ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರೂ ಪೈಲಟ್‍ಗಳು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಕರಿರಲಿಲ್ಲ.

helicopter crash airport chhattisgarhs 1

ಮನ ಪೊಲೀಸ್ ಠಾಣೆ ವ್ಯಾಪ್ತಿಯ ರಾಯ್ಪುರ್‌ದ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದ ಅಭ್ಯಾಸದ ವೇಳೆ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಎಸ್‍ಪಿ) ಪ್ರಶಾಂತ್ ಅಗರವಾಲ್ ತಿಳಿಸಿದ್ದಾರೆ.  ಇದನ್ನೂ ಓದಿ: ಆ್ಯಸಿಡ್ ದಾಳಿಗೊಳಗಾದ ಯುವತಿ ಆರೋಗ್ಯದಲ್ಲಿ ಚೇತರಿಕೆ

ಅಪಘಾತಕ್ಕೆ ತಕ್ಷಣವೇ ಕಾರಃಣ ಏನು ಎಂದು ತಿಳಿದು ಬಂದಿರಲಿಲ್ಲವಾಗಿತ್ತು. ನಿಖರವಾದ ಕಾರಣವನ್ನು ಖಚಿತ ಪಡಿಸಿಕೊಳ್ಳಲು ಡೈರಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಮತ್ತು ಛತ್ತೀಸ್‍ಗಢ ಸರ್ಕಾರವು ತಾಂತ್ರಿಕ ತನಿಖೆಯನ್ನು ಕೈಗೊಂಡಿದೆ.

ಹೆಲಿಕಾಪ್ಟರ್ ದುರಂತದ ಬಗ್ಗೆ ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ದುರಂತ ಅಪಘಾತದಲ್ಲಿ, ನಮ್ಮ ಪೈಲಟ್‍ಗಳಾದ ಕ್ಯಾಪ್ಟನ್ ಪಾಂಡ ಮತ್ತು ಕ್ಯಾಪ್ಟನ್ ಶ್ರೀವಾಸ್ತವ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬ ಸದಸ್ಯರಿಗೆ ಶಕ್ತಿಯನ್ನು ನೀಡಲಿ ಮತ್ತು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಮಸಿ ಬಳಿದವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ: ಕಾಳಿಸ್ವಾಮಿ

Share This Article
Leave a Comment

Leave a Reply

Your email address will not be published. Required fields are marked *