ಡೆಹ್ರಾಡೂನ್: ಉತ್ತರಾಖಂಡದ (Uttarakhand) ಕೇದಾರನಾಥ ಬಳಿ ಹೆಲಿಕಾಪ್ಟರ್ (Helicopter) ಪತನಗೊಂಡಿದ್ದು, ಈ ವೇಳೆ ಇಬ್ಬರು ಪೈಲಟ್ (Pilot), 4 ಯಾತ್ರಾರ್ಥಿಗಳು (Pilgrims) ಸೇರಿದಂತೆ 6 ಮಂದಿ ದುರ್ಮರಣಕ್ಕಿಡಾಗಿದ್ದಾರೆ.
ಕೇದಾರನಾಥದಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಗರುಡ ಚಟ್ಟಿಯಲ್ಲಿ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ಯಾತ್ರಿಕರನ್ನು ಗುಪ್ತಕಾಶಿ ಫಟಾದಿಂದ ಕೇದಾರನಾಥಕ್ಕೆ ಕರೆದೊಯ್ಯುತ್ತಿತ್ತು. ಘಟನೆಯಲ್ಲಿ ಇಬ್ಬರು ಪೈಲಟ್‍ಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.
Advertisement
#WATCH | Uttarakhand: A helicopter carrying Kedarnath pilgrims from Phata crashes, casualties feared; administration team left for the spot for relief and rescue work. Further details awaited pic.twitter.com/sDf4x1udlJ
— ANI (@ANI) October 18, 2022
Advertisement
ಹವಾಮಾನ ವೈಪರಿತ್ಯದಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಹೆಚ್ಚು ಸಾವು ನೋವುಗಳಾಗಿದ್ದು, ರಕ್ಷಣಾ ಕಾರ್ಯಕ್ಕಾಗಿ ಆಡಳಿತ ತಂಡವು ಸ್ಥಳಕ್ಕೆ ತೆರಳಿದೆ. ಇದುವರೆಗೆ ಆರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.