ಹೆಲಿಕಾಪ್ಟರ್ ಪತನವಾದ ಸ್ಥಳದಲ್ಲಿ ಶಂಕಿತ ವ್ಯಕ್ತಿ ಅರೆಸ್ಟ್

Public TV
2 Min Read
bipin rawat 1

ಚೆನ್ನೈ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡಿದ್ದು, ರಾವತ್ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನಾ ಸ್ಥಳದಲ್ಲಿ ಅನುಮಾನಾಸ್ಪದ ವ್ಯಕ್ತಿಯೊಬ್ಬನ್ನು  CRPF ಬಂಧಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಘಟನೆ ನಡೆದ ಸ್ಥಳ ವೆಲ್ಲಿಂಗ್‍ಟನ್‍ನಿಂದ ಏಳು ಕಿಮೀ ಪರ್ವತ ಪ್ರದೇಶದಲ್ಲಿದೆ ಎಂದು ತಿಳಿದು ಬಂದಿದೆ. ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು (ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು. ಇದನ್ನೂ ಓದಿ:  2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್

bipin rawats

ವೆಲ್ಲಿಂಗ್ಟನ್‍ನ ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿನಲ್ಲಿ ಇಂದು ಮಧ್ಯಾಹ್ನ ನಡೆಯಲಿದ್ದ ಕೆಡೆಟ್ ಸಂವಾದ ಕಾರ್ಯಕ್ರಮಕ್ಕೆ ಭಾಗವಹಿಸಲು ರಾವತ್ ಸೇರಿ 14 ಮಂದಿ ಹೆಲಿಕಾಪ್ಟರ್‌ನಲ್ಲಿ ಆಗಮಿಸುತ್ತಿದ್ದರು. ಇನ್ನೇನು 10 ಕೀ.ಮೀ. ಇರುವಂತೆ ಮಧ್ಯಾಹ್ನ 12:20ರ ಸುಮಾರಿಗೆ ಹೆಲಿಕಾಪ್ಟರ್ ಮರಕ್ಕೆ ಡಿಕ್ಕಿಯಾಗಿ ಪತನಗೊಂಡಿದೆ. ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದವರಲ್ಲಿ 11 ಮಂದಿ ಸಾವನ್ನಪ್ಪಿ, 3 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ತೆರಳಿದ್ದಾರೆ.  ಇದನ್ನೂ ಓದಿ: CDS ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ- ಪತ್ನಿ ಸೇರಿ11 ಮಂದಿ ಸಾವು

ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಪತನಗೊಂಡ ತಮಿಳುನಾಡಿನ ನೀಲಗಿರಿ ಅರಣ್ಯದ ವ್ಯಾಪ್ತಿಯ, ಘಟನಾ ಸ್ಥಳದಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ವ್ಯಕ್ತಿಯೊಬ್ಬನನ್ನು CRPF ಕೋಬ್ರಾ ಪಡೆ ಬಂಧಿಸಿದೆ ಎನ್ನಲಾಗಿದೆ. ಸೇನಾಪಡೆಗಳ ಉನ್ನತ ನಾಯಕರೊಬ್ಬರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹೇಗಾಯಿತು? ಎನ್ನುವುದರ ಬಗ್ಗೆ ನೆಟ್ಟಿಗರು ಚರ್ಚಿಸುತ್ತಿದ್ದಾರೆ. ಇದನ್ನೂ ಓದಿ: ಬಿಪಿನ್ ರಾವತ್ ಸ್ಥಿತಿ ಗಂಭೀರ – Mi-17 V5 ಹೆಲಿಕಾಪ್ಟರ್ ವಿಶೇಷತೆ ಏನು?

mi 17v5

ಘಟನಾ ಸ್ಥಳದಲ್ಲಿ 11 ಮೃತದೇಹಗಳು ಪತ್ತೆಯಾಗಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಗಂಭೀರವಾಗಿ ಗಾಯಗೊಂಡು ಪತ್ತೆಯಾಗಿರುವ ಮೂವರನ್ನು ನೀಲಗಿರೀಸ್‍ನ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣೆ ಮಾಡಿದವರಲ್ಲಿ ಬಿಪಿನ್ ರಾವತ್ ಕೂಡ ಒಬ್ಬರಾಗಿದ್ದು ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಪ್ರಾಥಮಿಕ ಮೂಲಗಳು ತಿಳಿದು ಬಂದಿದೆ. ಇದನ್ನೂ ಓದಿ: ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿದ್ದ Mi-17V5 ಪತನ – 11 ಮಂದಿಯ ಮೃತದೇಹ ಪತ್ತೆ

Share This Article
Leave a Comment

Leave a Reply

Your email address will not be published. Required fields are marked *