ಮಡಿಕೇರಿ: ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲು ಅಡ್ಡಿಯಾಗಿದ್ದು, ಹೀಗಾಗಿ ಕಾರ್ಯಾಚರಣೆಯನ್ನು ತಾತ್ಕಲಿಕವಾಗಿ ತಡೆಹಿಡಿಯಲಾಗಿದೆ.
ಮಂಜಿನ ನಗರಿ ಮಡಿಕೇರಿ ಮಹಾಮಳೆಗೆ ಅಕ್ಷರಶಃ ಸ್ತಭ್ದವಾಗಿದ್ದು, ತಾಲೂಕಿನ ಮುಕ್ಕೋಡ್ಲು, ಇಗ್ಗೋಡ್ಲು ಹಾಗೂ ಹಟ್ಟಿ ಹೊಳೆಯಲ್ಲಿ ಸಿಲುಕಿರುವವರನ್ನು ರಕ್ಷಣೆ ಮಾಡಲು ಸೇನೆ ಹಾಗೂ ಎನ್.ಡಿ.ಆರ್.ಎಫ್ ತಂಡಗಳು ಹರಸಾಹಸ ಪಡುತ್ತಿವೆ. ಈ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಕೊಚ್ಚಿಹೋಗಿದ್ದು, ಸುರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಅಡ್ಡಿಯುಂಟಾಗಿದೆ. ಅಲ್ಲದೇ ಮುಕ್ಕೋಡ್ಲು ಗ್ರಾಮವೊಂದರಲ್ಲೇ ಸುಮಾರು 60ಕ್ಕೂ ಹೆಚ್ಚು ಮಂದಿ ಅಪಾಯಕ್ಕೆ ಸಿಲುಕಿದ್ದು, ರಕ್ಷಣೆಯ ನಿರೀಕ್ಷೆಯಲ್ಲಿದ್ದಾರೆ.
Advertisement
ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿಹೋಗಿದ್ದು, ಕೇವಲ ಹೆಲಿಕಾಪ್ಟರ್ ಮೂಲಕವೇ ಸಂತ್ರಸ್ಥರನ್ನು ರಕ್ಷಣೆಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ ಸುರಿಯುತ್ತಿರುವ ಭಾರೀ ಮಳೆಯಿಂದ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಮಿಲಿಟರಿ ಅಧಿಕಾರಿಗಳು ಹೆಲಿಕಾಪ್ಟರ್ ಕಾರ್ಯಾಚರಣೆ ಸಾಧ್ಯವಾಗದೇ ಸುಮ್ಮನಾಗಿದ್ದಾರೆ. ಅಲ್ಲದೇ ಹೆಲಿಕಾಪ್ಟರ್ ಗಳನ್ನು ಇಳಿಸಲು ಸಹ ಕಷ್ಟವಾಗುತ್ತಿದೆ ಎಂದು ವಾಯುಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ನಿಗಧಿತ ಸ್ಥಳದಲ್ಲೇ ಯೋಧರು ಉಳಿದಿದ್ದು, ವಾತಾವರಣ ತಿಳಿಗೊಂಡ ಬಳಿಕ ಕೂಡಲೇ ಕಾರ್ಯಾಚರಣೆಯನ್ನು ನಡೆಸುವುದಾಗಿ ಮಾಹಿತಿ ನೀಡಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv