ಚೆನ್ನೈ: ತಮಿಳುನಾಡಿನ ಕುನೂರಿನಲ್ಲಿ ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ 13 ಮಂದಿ ಹುತಾತ್ಮರಾಗಿದ್ದು, ಇದರಲ್ಲಿ ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ ಕೂಡ ಒಬ್ಬರಾಗಿದ್ದಾರೆ.
Advertisement
ಕೇವಲ 29 ವರ್ಷ ವಯಸ್ಸಿನ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಜೈಸಿಂಗ್‍ಪುರ ಪ್ರದೇಶದ ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ ಅವರಿಗೆ 2 ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದೆ. ಸದ್ಯ ಇವರಿಗೆ 2 ತಿಂಗಳ ಪುಟ್ಟ ಕಂದಮ್ಮ ಇದೆ. ಇದೀಗ ವಿವೇಕ್ ಕಳೆದುಕೊಂಡು ಕುಟುಂಬ ಕಣ್ಣೀರಾಗಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇದನ್ನೂ ಓದಿ: ತೀರಾ ಕೆಳಮಟ್ಟದಲ್ಲೇ ಹಾರಾಡ್ತಿದ್ದ ಹೆಲಿಕಾಪ್ಟರ್ ಕೊನೆಯ ದೃಶ್ಯ ಲಭ್ಯ
Advertisement
Advertisement
ವಿವೇಕ್ ಅವರು ರಕ್ಷಣಾ ಪಡೆಯ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ಪಿಎಸ್‍ಒ ಆಗಿದ್ದರು. ಸೈನಿಕನಾಗಿ ಸೇನೆಗೆ ಸೇರಿದ್ದ ವಿವೇಕ್, ಪ್ರಸ್ತುತ ಪ್ಯಾರಾ ಕಮಾಂಡೋ ಆಗಿದ್ದರು. ರಾವತ್ ಅವರೊಂದಿಗೆ ತಮಿಳುನಾಡಿಗೆ ತೆರಳುತ್ತಿರುವ ಬಗ್ಗೆ ವಿವೇಕ್ ತಮ್ಮ ಪತ್ನಿಗೆ ಫೋನ್ ಕರೆ ಮೂಲಕ ತಿಳಿಸಿದ್ದರು. ಅದಾದ ಕೆಲ ಗಂಟೆಗಳಲ್ಲೇ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದೆ. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತಕ್ಕೆ ಬಲಿಯಾಗಿರುವ ಸಾಯಿ ತೇಜ್‍ಗೆ 27 ವರ್ಷ!
Advertisement
ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿದಂತೆ 13 ಮಂದಿ ಮೃತರಾಗಿದ್ದಾರೆ. ಅಲ್ಲದೆ ವಿವೇಕ್ ಅವರಂತೆ ಕೇವಲ 27 ವರ್ಷದ ಆಂಧ್ರಪ್ರದೇಶ ಮೂಲದ ಲ್ಯಾನ್ಸ್ ನಾಯಕ್ ಸಾಯಿ ತೇಜ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ – ನಾಳೆ ಮಧ್ಯಾಹ್ನವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
ದೆಹಲಿಯಿಂದ ಸೇನಾ ವಿಮಾನದಲ್ಲಿ ತಮಿಳುನಾಡಿಗೆ ಬಿಪಿನ್ ರಾವತ್ ವೆಲ್ಲಿಂಗ್ಟನ್‍ನ ಮಿಲಿಟರಿ ಕಾಲೇಜಿನಲ್ಲಿ ಉಪನ್ಯಾಸ ನೀಡಲು ಹೊರಟಿದ್ದರು. ಸೂಳೂರಿನಿಂದ ಊಟಿಯ ವೆಲ್ಲಿಂಗ್ಟನ್‍ಗೆ ಸೇನಾ ಹೆಲಿಕಾಪ್ಟರ್‍ನಲ್ಲಿ 14 ಮಂದಿ ಪಯಣ ಆರಂಭಿಸಿದ್ದರು. ಬುಧವಾರ ಮಧ್ಯಾಹ್ನ 12.22ಕ್ಕೆ ಕೂನೂರು ಬಳಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ವೆಲ್ಲಿಂಗ್ಟನ್‍ಗೆ 7 ಕಿ.ಮೀ ದೂರದ ಕಟ್ಟೇರಿ ಪರ್ವತ ಪ್ರದೇಶದ ಟೀ ಎಸ್ಟೇಟ್‍ನಲ್ಲಿ ದೊಡ್ಡ ಶಬ್ಧದೊಂದಿಗೆ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಸೇರಿ 13 ಮಂದಿ ಹುತಾತ್ಮರಾಗಿದ್ದಾರೆ.
ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರವನ್ನು ರವಾನಿಸಲಾಗುತ್ತಿದೆ. ಸೇನಾ ವಿಮಾನದಲ್ಲಿ ರಾವತ್, ಪತ್ನಿ ಮೃತದೇಹ ದೆಹಲಿಗೆ ರವಾನೆಯಾಗಲಿದೆ. ನಾಳೆ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ದೆಹಲಿಯ ರಾವತ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಳಿಕ ಕಾಮ್‍ರಾಜ್ ಮಾರ್ಗದಿಂದ ಅಂತಿಮಯಾತ್ರೆ ನಡೆಯಲಿದ್ದು, ದೆಹಲಿ ಕಂಟೋನ್‍ಮೆಂಟ್‍ನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಸದ್ಯ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರರವಿದೆ.