Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15 ದಿನಗಳಿಂದ ಲಾಡ್ಜ್‌ನಲ್ಲಿ ವಾಸ – ಮೈಸೂರು ಸ್ಫೋಟಕ್ಕೆ ಎನ್‌ಐಎ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 15 ದಿನಗಳಿಂದ ಲಾಡ್ಜ್‌ನಲ್ಲಿ ವಾಸ – ಮೈಸೂರು ಸ್ಫೋಟಕ್ಕೆ ಎನ್‌ಐಎ ಎಂಟ್ರಿ

Crime

15 ದಿನಗಳಿಂದ ಲಾಡ್ಜ್‌ನಲ್ಲಿ ವಾಸ – ಮೈಸೂರು ಸ್ಫೋಟಕ್ಕೆ ಎನ್‌ಐಎ ಎಂಟ್ರಿ

Public TV
Last updated: December 26, 2025 12:40 pm
Public TV
Share
3 Min Read
Helium Cylinder Blast Case
SHARE

– ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣದ ತನಿಖೆ ಚುರುಕು
– ಲಷ್ಕರ್ ಮೊಹಲ್ಲಾದ ಲಾಡ್ಜ್‌ನಲ್ಲಿ ಸಲೀಂ ವಾಸ

ಮೈಸೂರು: ಹೀಲಿಯಂ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ (Helium Cylinder Blast) ಈಗ ರಾಷ್ಟ್ರೀಯ ತನಿಖೆ (NIA) ದಳ ಎಂಟ್ರಿಯಾಗಿದೆ. ಇಂದು ಮೈಸೂರಿಗೆ(Mysuru) ಎನ್‌ಎಐ ಅಧಿಕಾರಿಗಳು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿ ಪೊಲೀಸರ ಜೊತೆ ತನಿಖೆಯ ಮಾಹಿತಿ ಪಡೆಯಲಿದ್ದಾರೆ.

ಸಾಧಾರಣವಾಗಿ ಹೀಲಿಯಂ ಸ್ಫೋಟವಾಗುವುದಿಲ್ಲ. ಹೀಗಿದ್ದರೂ ಅರಮನೆಯ ಆವರಣದಲ್ಲೇ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಹಲವಾರು ಅನುಮಾನಗಳು ಈಗ ವ್ಯಕ್ತವಾಗಿದೆ. ಸ್ಫೋಟದ ತೀವ್ರತೆಗೆ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್‌ ಮಾರುತ್ತಿದ್ದ ಸಲೀಂ (40) ಮೃತಪಟ್ಟಿದ್ದು, ಮೃತದೇಹ ಛಿದ್ರ-ಛಿದ್ರವಾಗಿದೆ.

ಆರಂಭದಲ್ಲಿ ಮೃತ ಸಲೀಂ ಕೋಲ್ಕತ್ತಾದ ಮೂಲದವನು ಎನ್ನಲಾಗಿತ್ತು. ಆದರೆ ಈಗ ಉತ್ತರ ಪ್ರದೇಶ (Uttar Pradesh) ಮೂಲದವನು ಎಂಬ ಮಾಹಿತಿ ಲಭ್ಯವಾಗಿದೆ. ಉತ್ತರ ಪ್ರದೇಶದಿಂದ ಸಹೋದರರ ಜೊತೆ ಮೈಸೂರಿಗೆ ಆಗಮಿಸಿದ ಈತ ಕಳೆದ 15 ದಿನಗಳಿಂದ ಲಷ್ಕರ್ ಮೊಹಲ್ಲಾದ ಷರೀಫ್ ಲಾಡ್ಜ್‌ನಲ್ಲಿ ವಾಸವಾಗಿದ್ದ.

 

ಅನುಮಾನ ಯಾಕೆ?
ಮೈಸೂರು ಪ್ರಕರಣದಲ್ಲಿ ಹೀಲಿಯಂಗೆ ಬೇರೆ ಗ್ಯಾಸ್‌ ಮಿಶ್ರಣ ಮಾಡಿರುವ ಅನುಮಾನ ಮೇಲ್ನೋಟಕ್ಕೆ ವ್ಯಕ್ತವಾಗಿದೆ. ಮೂಲಗಳ ಪ್ರಕಾರ ಒಂದು ತಿಂಗಳ ಹಿಂದೆ ಸಲೀಂ ಮೈಸೂರಿಗೆ ಬಂದಿದ್ದಾನೆ. ಬಂದವನಿಗೆ ಅಷ್ಟು ಸುಲಭವಾಗಿ ಹೀಲಿಯಂ ಸಿಲಿಂಡರ್‌ ಸಿಕ್ಕಿದ್ದು ಹೇಗೆ ಎನ್ನುವ ಪ್ರಶ್ನೆಯೂ ಈಗ ಎದ್ದಿದೆ. ಇದನ್ನೂ ಓದಿ: Chitradurga Bus Accident | ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಸಾವು – ಮೃತರ ಸಂಖ್ಯೆ 7ಕ್ಕೆ ಏರಿಕೆ

ಸೈಕಲ್‌ನಲ್ಲಿ ಹೀಲಿಯಂ ಬಲೂನ್ ಮಾರುತ್ತಿದ್ದಾಗ ರಾತ್ರಿ 8:30ರ ವೇಳೆಗೆ ಸಿಲಿಂಡರ್ ಸ್ಫೋಟವಾಗಿದೆ. ಪ್ರತ್ಯಕ್ಷದರ್ಶಿ ಅರಮನೆಯ ಗೈಡ್‌ ನೀಡಿದ ಮಾಹಿತಿ ಪ್ರಕಾರ ಬಲೂನ್ ಮಾರಾಟಗಾರ ಅರಮನೆ ಮುಂಭಾಗದಲ್ಲಿ ನಿಂತು ಯಾವತ್ತೂ ಬಲೂನ್ ಮಾರುತ್ತಿರಲಿಲ್ಲ. ಆತ ಬಂದ ಕೂಡಲೇ ಸ್ಫೋಟ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಗುರುವಾರ (ಡಿ.25) ಈ ಜಾಗದಲ್ಲಿ ನಿಂತು ಬಲೂನು ಮಾರಾಟ ಮಾಡಿರಲಿಲ್ಲ. ಹಾಗಾದರೆ ಅರಮನೆ ಮುಂಭಾಗವೇ ಸಿಲಿಂಡರ್ ಸ್ಪೋಟ ಯಾಕಾಯ್ತು  ಎಂಬ ಪ್ರಶ್ನೆ  ಹುಟ್ಟಿಕೊಂಡಿದೆ.

ಸಿಲಿಂಡರ್ ಸ್ಪೋಟ ಆಕಸ್ಮಿಕವೇ? ಅಥವಾ ಉದ್ದೇಶಪೂರ್ವಕವೇ? ಯಾವತ್ತೂ ಅರಮನೆ ಮುಂಭಾಗದಲ್ಲಿ ಕಾಣಿಸಿಕೊಳ್ಳದವನೂ ರಾತ್ರಿ ಇಲ್ಲಿಗೆ ಬಂದಿದ್ದು ಯಾಕೆ? ಏಕಾಏಕಿ ಅರಮನೆ ಮುಂಭಾಗವೇ ಸಿಲಿಂಡರ್ ಸ್ಫೋಟ ಯಾಕಾಯಿತು ಎಂಬ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಪೊಲೀಸರು ಈಗ ತನಿಖೆ ಆರಂಭಿಸಿದ್ದಾರೆ.

ಅರಮನೆ ಬಳಿ ವಸ್ತುಗಳನ್ನು ಮಾರಾಟ ಮಾಡುವವರು ಸಾಮಾನ್ಯವಾಗಿ ಮೈಸೂರಿನ ಅಸುಪಾಸಿನ ಜನರೇ ಆಗಿರುತ್ತಾರೆ. ಈಗ ಬಲೂನ್ ಮಾರುತ್ತಿದ್ದ ವ್ಯಕ್ತಿಯ ಹಿನ್ನೆಲೆಯ ಬಗ್ಗೆ ಈಗ ತನಿಖೆ ಶುರುವಾಗಿದೆ. ಉತ್ತರ ಪ್ರದೇಶ ಮೂಲದ ಸಲೀಂ ಮೈಸೂರಿಗೆ ಬಂದಿದ್ದು ಯಾವಾಗ? ಎಷ್ಟು ವರ್ಷದಿಂದ ಬಲೂನ್ ಮಾರುತ್ತಿದ್ದ? ಅರಮನೆ ಮುಂಭಾಗವೇ ಸಲೀಂ ನಿರಂತರವಾಗಿ ಬಲೂನ್ ಮಾರುತ್ತಿದ್ದನೇ ಅಥವಾ ನಿನ್ನೆ ಮೊದಲು ಬಂದಿದ್ದ ಎಂಬ ಪ್ರಶ್ನೆಗೆ ಉತ್ತರ ತಿಳಿಯಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇಬ್ಬರ ವಿಚಾರಣೆ
ಸಲೀಂ ಜೊತೆ ವಾಸವಿದ್ದ ಇಬ್ಬರನ್ನು ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಸಲೀಂ ಜೊತೆ ಬಲೂನ್ ಮಾರಾಟಕ್ಕೆ ಉತ್ತರ ಪ್ರದೇಶದಿಂದ ಇಬ್ಬರು ಬಂದಿದ್ದರು. ಪ್ರತಿ ದಿನ ಸಲೀಂ ಜೊತೆ ಇಬ್ಬರು ಬಲೂನ್ ಮಾರಾಟ ಮಾಡುವುದಕ್ಕೆ ಹೋಗುತ್ತಿದ್ದರು. ನಿನ್ನೆ ಸಲೀಂ ಒಬ್ಬನೇ ಮಾತ್ರ ಬಲೂನ್ ಮಾರಾಟ ಮಾಡಲು ಹೋಗಿದ್ದ. ಮತ್ತಿಬ್ಬರು ನಿನ್ನೆ ರೂಂನಲ್ಲಿಯೇ ಇದ್ದರು. ಲಾಡ್ಜ್ ಮುಂಭಾಗದಲ್ಲೇ ಎರಡು ಸೈಕಲ್ ಗಳು ನಿಂತಿತ್ತು.

Helium Cylinder Blast Case Saleem

 

ಅರಮನೆಯೊಳಗೆ ಫೋಟೋ
ಸಲೀಂ ಅರಮನೆಯ ಒಳಗಡೆ ಹೋಗಿರುವ ಫೋಟೋ ಈಗ ಲಭ್ಯವಾಗಿದೆ. ಅರಮನೆಯೊಳಗೆ ಸಲೀಂ ಹೋಗಿದ್ದು ಯಾವಾಗ? ಸಲೀಂ ಕೇವಲ ಬಲೂನ್ ಮಾರಾಟ ಮಾಡುತಿದ್ದನೇ ಅಥವಾ ಬೇರೆ ಯಾವ ಕೆಲಸ ಮಾಡುತ್ತಿದ್ದನೇ ಈ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೀಲಿಯಂ ಸ್ಫೋಟಗೊಳ್ಳುತ್ತಾ?
ಹೀಲಿಯಂ ಜಡ ಅನಿಲವಾಗಿದ್ದು ಆಮ್ಲಜನಕ ಅಥವಾ ಇತರ ಅಂಶಗಳೊಂದಿಗೆ ಪ್ರತಿಕ್ರಿಯಿಸದ ಕಾರಣ ಅದು ಸ್ಫೋಟವಾಗುವುದಿಲ್ಲ. ಇದು ಸಂಪೂರ್ಣವಾಗಿ ದಹಿಸಲಾಗದ ಮತ್ತು ಹೆಚ್ಚು ದಹಿಸಬಲ್ಲ ಹೈಡ್ರೋಜನ್‌ ಬಲೂನ್‌ಗಳಿಗೆ ಹೆಚ್ಚು ಸುರಕ್ಷಿತವಾಗಿದೆ. ಈ ಕಾರಣಕ್ಕೆ ಜಾತ್ರೆಗಳಲ್ಲಿ, ಪ್ರವಾಸಿ ಸ್ಥಳಗಳಲ್ಲಿ ಹೀಲಿಯಂ ತುಂಬಿಸಿದ ಬಲೂನ್‌ಗಳನ್ನು ಮಾರಾಟ ಮಾಡಲಾಗುತ್ತದೆ.

ಹೀಲಿಯಂ ರಾಸಾಯನಿಕವಾಗಿ ಸ್ಥಿರವಾಗಿರುತ್ತದೆ ಮತ್ತು ಸುಡುವುದಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ ಹೈಡ್ರೋಜನ್ ಬಲೂನ್‌ ಗಾಳಿಯಲ್ಲಿರುವ ಆಮ್ಲಜನಕದೊಂದಿಗೆ ಪ್ರತಿಕ್ರಿಯಿಸಿದಾಗ ಸ್ಫೋಟ ಆಗುತ್ತದೆ. ಪಾರ್ಟಿಗಳಲ್ಲಿ MRI ಕೂಲಿಂಗ್ ಮತ್ತು ವೈಜ್ಞಾನಿಕ ಸಂಶೋಧನೆಗಳಲ್ಲಿ ಹೀಲಿಯಂ ಬಳಕೆ ಮಾಡಲಾಗುತ್ತದೆ.

TAGGED:cylinder blastmysurumysuru palaceಮೈಸೂರುಸಿಲಿಂಡರ್ ಸ್ಫೋಟಹೀಲಿಯಂ ಬಲೂನು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
5 hours ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
5 hours ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
5 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
5 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
6 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?