ಮುಂಬೈ: ಯಾವುದೇ ಹೆಣ್ಣಿನ ವಿರುದ್ಧ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಬಾಲಿವುಡ್ ಹಿರಿಯ ನಟಿ ಮತ್ತು ಸಂಸದೆ ಹೇಮಾಮಾಲಿನಿ ಹೇಳಿದ್ದಾರೆ.
Advertisement
ತಮ್ಮ ಕ್ಷೇತ್ರದ ರಸ್ತೆಗಳನ್ನು ಹೇಮಾಲಿನಿ ಕೆನ್ನೆಗೆ ಹೋಲಿಸುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಚಿವ ಗುಲಾಬ್ ರಾವ್ ಪಾಟೀಲ್ ಹೇಳಿಕೆಗೆ ಇದೀಗ ಹೇಮಾಮಾಲಿನಿ ಅವರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ತಮ್ಮ ಕ್ಷೇತ್ರದ ರಸ್ತೆಯನ್ನು ಹೇಮಾಮಾಲಿನಿ ಕೆನ್ನೆಗೆ ಹೋಲಿಕೆ – ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಸಚಿವ
Advertisement
Advertisement
ಇದೀಗ ನಟಿ ಹೇಮಾಮಾಲಿನಿ ಅವರು ಸಂದರ್ಶನವೊಂದರಲ್ಲಿ, ನಾನು ನನ್ನ ಕೆನ್ನೆಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಉತ್ತಮ. ಈ ಮಾತನ್ನು ಜನಸಾಮಾನ್ಯರು ಹೇಳಿದ್ದರೆ ನಿರ್ಲಕ್ಷಿಸಬಹುದಿತ್ತು. ಆದರೆ ಈ ಹೇಳಿಕೆ ನೀಡಿರುವುದು ಓರ್ವ ಸಚಿವರು. ಅವರು ಓರ್ವ ವಿಧಾನಸಭೆಯ ಅಥವಾ ಯಾವುದೋ ಕ್ಷೇತ್ರದ ಸದಸ್ಯರಾಗಿರುವುದರಿಂದ ಈ ಮಾತು ಅವರಿಗೆ ಕ್ಷೋಭೆ ತರುವುದಿಲ್ಲ. ಯಾವುದೇ ಹೆಣ್ಣಿನ ವಿರುದ್ಧ ಈ ರೀತಿ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: YouTube ನೋಡ್ಕೊಂಡು ಪತ್ನಿಗೆ ಡೆಲಿವರಿ ಮಾಡಿಸಿದ- ಮುಂದೆ ಆಗಿದ್ದೇನು ಗೊತ್ತಾ?
Advertisement
#WATCH “A trend of such statements was started by Lalu Ji years ago and many people have followed this trend. Such comments are not in a good taste,” says BJP MP Hema Malini on Maharashtra minister Gulabrao Patil comparing roads to her cheeks pic.twitter.com/SJg5ZTrbMw
— ANI (@ANI) December 20, 2021
ಇತ್ತೀಚೆಗಷ್ಟೇ ಮಹಾರಾಷ್ಟ್ರದ ಸಚಿವ ಮತ್ತು ಶಿವಸೇನೆಯ ಹಿರಿಯ ನಾಯಕ ಗುಲಾಬ್ ರಾವ್ ಪಾಟೀಲ್ ಭಾಷಣದ ವೇಳೆ 30 ವರ್ಷಗಳಿಂದ ಶಾಸಕನಾಗಿರುವ ನನ್ನ ಕ್ಷೇತ್ರಕ್ಕೆ ಬಂದು ಒಮ್ಮೆ ರಸ್ತೆ ನೋಡಿ. ಅದು ಹೇಮಾಮಾಲಿನಿ ಅವರ ಕೆನ್ನೆಯಂತೆ ಇಲ್ಲದಿದ್ದರೆ, ನಾನು ರಾಜೀನಾಮೆ ನೀಡುತ್ತೇನೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕುರಿತಂತೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಎಚ್ಚರಿಕೆ ನೀಡಿದ್ದರು. ಹೀಗಾಗಿ ಗುಲಾಬ್ ರಾವ್ ಪಾಟೀಲ್ ನಾನು ಯಾರನ್ನೂ ನೋಯಿಸುವ ಉದ್ದೇಶವನ್ನು ಹೊಂದಿರಲಿಲ್ಲ ಎಂದು ಕ್ಷಮೆಯಾಚಿಸಿದ್ದರು.