ರಾಂಚಿ: ಮೂರನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ (Hemanth Soren) ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ಇವರಿಗೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸಿದರು.
ಈ ಮೂಲಕ ಹೇಮಂತ್ ಸೊರೇನ್ ಅವರು ಜಾರ್ಖಂಡ್‌ನ 13 ನೇ ಮುಖ್ಯಮಂತ್ರಿಯಾದರು. ಈ ಸಂದರ್ಭದಲ್ಲಿ ಹೇಮಂತ್ ಸೊರೇನ್ ಅವರ ತಂದೆ ಶಿಬು ಸೊರೇನ್, ತಾಯಿ ರೂಪಿ ಸೊರೇನ್, ಕಾಂಗ್ರೆಸ್, ಜೆಎಂಎಂ ಮತ್ತು ಆರ್‌ಜೆಡಿ ಪ್ರಮುಖ ನಾಯಕರು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜಸ್ಥಾನದ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ಮೀನಾ ರಾಜೀನಾಮೆ
ಇದಕ್ಕೂ ಮುನ್ನ ಸೊರೇನ್ ಅವರು ಇಂದು ಮಧ್ಯಾಹ್ನ ಉನ್ನತ ನಾಯಕರೊಂದಿಗೆ ರಾಜಭವನಕ್ಕೆ ತಲುಪಿದರು. ಹೇಮಂತ್ ಸೊರೇನ್ ಅವರು ರಾಜ್ಯಪಾಲರ ಮುಂದೆ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು. ಅಲ್ಲದೇ ತಮ್ಮ ಶಾಸಕರ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದರು.
ಅಕ್ರಮ ಹಣ ವರ್ಗಾವಣೆ, ಭೂ ಹಗರಣದ ಆರೋಪದ ಮೇಲೆ ಜೈಲು ಪಾಲಾದ ನಂತರ ಚಂಪೈ ಸೊರೇನ್ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು. ಹೇಮಂತ್ ಸೊರೇನ್ ಅವರನ್ನು ಬಂಧಿಸಿದ ಎರಡು ದಿನಗಳ ನಂತರ ಚಂಪೈ ಪ್ರಮಾಣವಚನ ಸ್ವೀಕರಿಸಿದ್ದರು. ಇದೇ ಜೂನ್ 28ರಂದು ಹೇಮಂತ್ ಸೊರೇನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ 5 ತಿಂಗಳ ಬಳಿಕ ಚಂಪೈ ಅವರು ಬುಧವಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.