Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ

Cinema

ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ

Public TV
Last updated: December 8, 2025 4:04 pm
Public TV
Share
3 Min Read
Alpha Movie
SHARE

ಮಾಲೂರಿನ ಹೇಮಂತ್ ಕುಮಾರ್ ʻಆಲ್ಫಾʼ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಎಲ್.ಎ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದ್ ಕುಮಾರ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಗೀತಾ ಹಾಗೂ ಗುರುದೇವ ಹೊಯ್ಸಳ ಚಿತ್ರಗಳ ನಿರ್ದೇಶಕ ವಿಜಯ್ ನಿರ್ದೇಶಿಸಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ನನಗೆ ಮಾಸ್ತಿ ಅವರ ಮೂಲಕ ನಾಯಕ ಹೇಮಂತ್ ಕುಮಾರ್ ಅವರ ಪರಿಚಯವಾಯಿತು. ಅವರಿಗಿರುವ ಸಿನಿಮಾ ಬಗ್ಗೆಗಿನ ಆಸಕ್ತಿ ಬಹಳ ಇಷ್ಟವಾಯಿತು. ಹೇಮಂತ್ ಕುಮಾರ್ ಅವರು ಒಂದೊಳ್ಳೆ ಕಥೆ ಇದ್ದರೆ ಸಿನಿಮಾ ಮಾಡೋಣ ಎಂದು ಹೇಳಿದರು. ಲವ್ ಜಾನರ್‌ನ ಚಿತ್ರ ಬೇಡ ಎಂದರು. ಆಗ ಈ ಆಲ್ಫಾ ಚಿತ್ರದ ಕಥೆ ಹೇಳಿದೆ. ಅವರಿಗೆ ಇಷ್ಟವಾಯಿತು. ಮಾರ್ಚ್‌ನಲ್ಲಿ ಚಿತ್ರ ಪ್ರಾರಂಭವಾಯಿತು. ಈಗ ಮುಕ್ತಾಯ ಹಂತದಲ್ಲಿದೆ. ಫೆಬ್ರವರಿ ವೇಳೆಗೆ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

Alpha Movie 1

ಇದು ಆಕ್ಷನ್ ಥ್ರಿಲ್ಲರ್ ಚಿತ್ರ ಮಾತ್ರವಲ್ಲ. ಸೆಂಟಿಮೆಂಟ್ ಸೇರಿದಂತೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಚಿತ್ರ. ಇದು ಮೂರು ಜನ ಅಪ್ಪಂದಿರ ಹಾಗೂ ಮೂರು ಜನ ಮಕ್ಕಳ ಸುತ್ತ ನಡೆಯುವ ಕಥೆ. ಅಪ್ಪನ ತಂಟೆಗೆ ಯಾರಾದರೂ ಬಂದರೆ, ಮಕ್ಕಳ ಪ್ರತೀಕಾರ ಹೇಗಿರುತ್ತದೆ ಎಂದು ತಿಳಿಸುವ ಕಥೆಯೂ ಹೌದು. ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಹೇಮಂತ್ ಕುಮಾರ್, ನಾಯಕನಾಗಲೂ ಬೇಕಾಗಿರುವ ಪೂರ್ವಸಿದ್ಧತೆಗಳನ್ನು ಮಾಡಿಕೊಂಡು ಬಂದಿದ್ದರು. ಹಾಗಾಗಿ ಅವರಿಗೆ ಅಭಿನಯ ಅಷ್ಟು ಕಷ್ಟವಾಗಲಿಲ್ಲ ಎಂದರು.

ಕೇರಳ ಮೂಲದ ಗೋಪಿಕಾ ಸುರೇಶ್ ಹಾಗೂ ಈಗಾಗಲೇ ಕೆಲವು ಚಿತ್ರಗಳಲ್ಲಿ ನಟಿಸಿರುವ ಆಯನಾ ಈ ಚಿತ್ರದ ನಾಯಕಿಯರು. ಬಿಗ್‌ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ಕೂಡ ವಿಶೇಷಪಾತ್ರದಲ್ಲಿ ಅಭಿನಯಿಸಿದ್ದಾರೆ. ಅವಿನಾಶ್, ಅಚ್ಯುತಕುಮಾರ್, ಮಾನಸಿ ಸುಧೀರ್, ರಮೇಶ್ ಇಂದಿರಾ, ಬಾಲು ನಾಗೇಂದ್ರ, ವಿನಯ್ ಬಿದ್ದಪ್ಪ, ಮಹಾಂತೇಶ್, ರಾಘು ಶಿವಮೊಗ್ಗ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ. ಜೆ.ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಸುಮಧುರ ಹಾಡುಗಳು ಹಾಗೂ ಕಾರ್ತಿಕ್ ಅವರ ಛಾಯಾಗ್ರಹಣ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ಎಲ್ಲಾ ತಂತ್ರಜ್ಞರ ಕಾರ್ಯವೈಖರಿ ಉತ್ತಮವಾಗಿದೆ ಎಂದು ನಿರ್ದೇಶಕ ವಿಜಯ್ ತಿಳಿಸಿದರು.

Alpha Movie 2

ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿ ಮಾತನಾಡಿದ ನಾಯಕ ಹೇಮಂತ್ ಕುಮಾರ್, ಮಾಲೂರು ಶ್ರೀನಿವಾಸ್ ಅವರ ಮೂಲಕ ಮಾಸ್ತಿ ಅವರ ಪರಿಚಯವಾಯಿತು. ಮಾಸ್ತಿ ಅವರು ನಿರ್ದೇಶಕ ವಿಜಯ್ ಅವರನ್ನು ಪರಿಚಯಿಸಿದರು. ವಿಜಯ್ ಅವರು ಹೇಳಿದ ಕಥೆ ಇಷ್ಟವಾಯಿತು. ನಂತರ ಈ ಸಿನಿಮಾ ಆರಂಭವಾಯಿತು. ನನಗೆ ನಾಯಕನಾಗಬೇಕೆಂಬುದು ಬಹಳ ದಿನಗಳ ಕನಸು. ಆದರೆ ಪೂರ್ವ ತಯಾರಿ ಇಲ್ಲದೆ ನಟಿಸುವುದು ಬೇಡ ಅಂದುಕೊಂಡು ನಾಯಕನಾಗಲೂ ಬೇಕಾದ ಎಲ್ಲಾ ತರಭೇತಿಗಳನ್ನು ಪಡೆದುಕೊಂಡು ಬಂದು ಈ ಚಿತ್ರದಲ್ಲಿ ನಟಿಸಿದ್ದೇನೆ. ನನ್ನ ಮೊದಲ ಚಿತ್ರಕ್ಕೆ ಅಷ್ಟೇ ಒಳ್ಳೆಯ ತಂಡ ಸಿಕ್ಕಿದೆ. ನನ್ನ ತಂದೆ ಆನಂದ್ ಕುಮಾರ್ ಅವರು ಈ ಚಿತ್ರದ ನಿರ್ಮಾಪಕರು. ಆದರೆ, ನಾನೇ ಪ್ರೊಡಕ್ಷನ್ ನೋಡಿಕೊಂಡಿದ್ದೇನೆ. ನಿರ್ಮಾಣ ನಿರ್ವಾಹಕ ಚಂಪಕಧಾಮ ಬಾಬು ಅವರು ಸಹಕಾರ ನೀಡಿದ್ದಾರೆ. ಎಲ್ಲರ ಶ್ರಮದಿಂದ ಒಂದೊಳ್ಳೆ ಚಿತ್ರ ನಿರ್ಮಾಣವಾಗಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಫೆಬ್ರವರಿ ವೇಳೆಗೆ ಚಿತ್ರ ತೆರೆಗೆ ಬರಲಿದೆ ಎಂದರು.

ನಾನು ಈ ಚಿತ್ರದಲ್ಲಿ ಈವರೆಗೂ ಮಾಡಿರದ ವಿಶೇಷ ಹಾಗೂ ವಿಭಿನ್ನ ಪಾತ್ರ ಮಾಡಿದ್ದೇನೆ. ಒಂದೊಳ್ಳೆ ತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದು ಕಾರ್ತಿಕ್ ಮಹೇಶ್ ತಿಳಿಸಿದರು. ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿರುವುದಾಗಿ ನಾಯಕಿ ಆಯನಾ ಹೇಳಿದರು. ನನ್ನದು ನಾಯಕನ ಪ್ರೇಯಸಿಯ ಪಾತ್ರ ಎಂದರು ಮತ್ತೊಬ್ಬ ನಾಯಕಿ ಗೋಪಿಕಾ ಸುರೇಶ್. ಚಿತ್ರದಲ್ಲಿ ನಟಿಸಿರುವ ಬಾಲು ನಾಗೇಂದ್ರ, ರಾಘು ಶಿವಮೊಗ್ಗ, ಮಹಾಂತೇಶ್, ವಿನಯ್ ಬಿದ್ದಪ್ಪ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಹಾಡುಗಳ ಬಗ್ಗೆ ಅನೂಪ್ ಸೀಳಿನ್, ಸಂಭಾಷಣೆ ಕುರಿತು ಮಾಸ್ತಿ ಮಾಹಿತಿ ನೀಡಿದರು. ಛಾಯಾಗ್ರಾಹಕ ಕಾರ್ತಿಕ್ , ಕಲಾ ನಿರ್ದೇಶಕ ಅಮರ್ ಹಾಗೂ ನಿರ್ಮಾಣ ನಿರ್ವಾಹಕ ಚಂಪಕಧಾಮ ಬಾಬು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

TAGGED:AlphaKannada moviesandalwoodಆಲ್ಫಾ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Siddaramaiah 15
Bengaluru City

ಕರ್ನಾಟಕದಲ್ಲಿ ಹೆಚ್ಚಾದ ಗ್ಯಾಸ್ ಟ್ರಬಲ್; ರಾಜ್ಯ V/S ಕೇಂದ್ರದ ನಡುವೆ ತಾರತಮ್ಯ ವಾರ್ – ಸಿದ್ದರಾಮಯ್ಯ ಕಿಡಿ

Public TV
By Public TV
1 minute ago
siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
22 minutes ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
2 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
2 hours ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?