ದಾವಣಗೆರೆ: ನಿತ್ಯ ಬಿಳಿ ಬಣ್ಣದ ಮೊಟ್ಟೆ ಇಡುತ್ತಿದ್ದ ಕೋಳಿ, ಇದ್ದಕ್ಕಿದ್ದಂತೆ ನೀಲಿ ಬಣ್ಣದ ಮೊಟ್ಟೆ ಇಟ್ಟು ಅಚ್ಚರಿ ಮೂಡಿಸಿದ ಘಟನೆ ಚನ್ನಗಿರಿಯ (Channagiri) ನಲ್ಲೂರ ಗ್ರಾಮದಲ್ಲಿ ನಡೆದಿದೆ.
ಸೈಯದ್ ನೂರ್ ಎಂಬವರಿಗೆ ಸೇರಿದ ನಾಟಿ ಕೋಳಿ ನೀಲಿ ಬಣ್ಣದ ಮೊಟ್ಟೆ (Blue Egg) ಇಟ್ಟಿದೆ. ಸೈಯದ್ ಮನೆಯಲ್ಲಿ ಹತ್ತು ಕೋಳಿಗಳಿವೆ. ಇದರಲ್ಲಿ ಒಂದು ಕೋಳಿ ಇದ್ದಕ್ಕಿದ್ದಂತೆ ನೀಲಿ ಬಣ್ಣದ ಮೊಟ್ಟೆ ಇಟ್ಟಿದೆ. ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮೊಟ್ಟೆಯನ್ನು ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆಯಲ್ಲಿ ಹಸುಗೂಸನ್ನು ಹತ್ಯೆಗೈದಿದ್ದ ಪಾಪಿ ತಾಯಿ ಅರೆಸ್ಟ್
ಈ ಬಗ್ಗೆ ಪ್ರತಿಕ್ರಿಯಿಸಿರುವ ಚನ್ನಗಿರಿ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಅಶೋಕ, ಮೆದೊಜೀರಕಾಂಗದಲ್ಲಿ ಬಿಲಿವರ್ಡಿನ್ ಎಂಬ ವರ್ಣ ದ್ರವ್ಯದ ಕಾರಣಕ್ಕೆ ನೀಲಿ ಬಣ್ಣ ಬಂದಿರುವ ಸಾದ್ಯತೆ ಇದೆ. ಮೊಟ್ಟೆಯ ಮೇಲ್ಭಾಗ ಮಾತ್ರ ನೀಲಿ. ಉಳಿದಂತೆ ಮೊಟ್ಟೆ ಮಾಮೂಲಾಗಿ ಇರುತ್ತದೆ. ಹೀಗೆ ನಿರಂತರವಾಗಿ ನೀಲಿ ಮೊಟ್ಟೆ ಹಾಕಿದ್ದರೇ ವೈಜ್ಞಾನಿಕವಾಗಿ ಪರಿಶೀಲನೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ. ಇದನ್ನೂ ಓದಿ: ದಾವಣಗೆರೆ | ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತನ ಮೇಲೆ ಚಿರತೆ ದಾಳಿ