ಜಿಂಬಾಬ್ವೆ ಕ್ರಿಕೆಟ್‌ ದಿಗ್ಗಜ ಹೀತ್‌ ಸ್ಟ್ರೀಕ್‌ ಬದುಕಿದ್ದಾರೆ – ಆಪ್ತ ಹೆನ್ರಿ ಒಲೊಂಗಾ ಅಚ್ಚರಿಯ ಟ್ವೀಟ್‌

Public TV
3 Min Read
Heath Streak 2

ಜೋಹಾನ್ಸ್‌ಬರ್ಗ್‌: ಜಿಂಬಾಬ್ವೆ (Zimbabwe) ಕ್ರಿಕೆಟ್‌ ದಿಗ್ಗಜ ಹೀತ್‌ ಸ್ಟ್ರೀಕ್‌ (49) (Heath Streak) ಕೊನೆಯುಸಿರೆಳೆದಿದ್ದಾರೆ. ಕರುಳು ಹಾಗೂ ಯಕೃತ್‌ ಕ್ಯಾನ್ಸರ್‌ ಕಾಯಿಲೆಯಿಂದ ಬಳುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಮಾಜಿ ಸಹೋದ್ಯೋಗಿ ಮಾಹಿತಿ ಹಂಚಿಕೊಂಡಿರುವುದಾಗಿ ವರದಿಯಾಗಿತ್ತು. ಆದರೀಗ ಹೀತ್‌ಸ್ಟ್ರೀಕ್‌ ಮೃತಪಟ್ಟಿಲ್ಲ ಬದುಕಿದ್ದಾರೆ ಎಂಬ ಅಚ್ಚರಿಯ ಸುದ್ದಿಯನ್ನ ಅವರ ಮಾಜಿ ಸಹ ಆಟಗಾರ ಹೆನ್ರಿ ಒಲೊಂಗಾ (Henry Olonga) ಹಂಚಿಕೊಂಡಿದ್ದಾರೆ.

ಮೊದಲಿಗೆ ಹೀತ್‌ ಸ್ಟ್ರೀಕ್‌ ಮೃತಪಟ್ಟಿದ್ದಾರೆ ಎಂದು ತಿಳಿದು ಹೆನ್ರಿ ಒಲೊಂಗಾ ಕೂಡ ಟ್ವೀಟ್‌ ಮೂಲಕ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಟ್ವೀಟ್‌ ಮಾಡಿದ, ಹೀತ್‌ ಸ್ಟ್ರೀಕ್‌ ಜೊತೆಗಿನ ವಾಟ್ಸ್‌ಆಪ್‌ ಸಂಭಾಷಣೆಯ ಸ್ಕ್ರೀನ್‌ ಶಾಟ್‌ ಹಂಚಿಕೊಂಡಿದ್ದಾರೆ. ಅದರಲ್ಲಿ ಹೀತ್‌ ಸ್ಟ್ರೀಕ್‌ ಅವರ ಕಡೆಯಿಂದ ‘ನಾನಿನ್ನೂ ಬದುಕಿದ್ದೇನೆ’ ಎಂದು ಉತ್ತರ ಬರೆದಿರುವುದನ್ನು ಕಾಣಬಹುದಾಗಿದೆ. ಹೀತ್‌ ಸ್ಟ್ರೀಕ್‌ ಸತ್ತಿದ್ದಾರೆ ಎಂಬ ಸುದ್ದಿ ತಪ್ಪಾಗಿ ಹಬ್ಬಿದೆ. ಸೋಷಿಯಲ್‌ ಮೀಡಿಯಾಗಳಲ್ಲಿ ಇದರ ವೈಭವೀಕರಣ ನಡೆದಿದೆ. ಅವರಿಂದಲೇ ಈಗ ಮಾಹಿತಿ ಲಭ್ಯವಾಗಿದ್ದು, 3ನೇ ಅಂಪೈರ್‌ ಅವರನ್ನು ಮರಳಿ ಕರೆತಂದಿದ್ದಾರೆ. ಪ್ರೀತಿಯ ಜನರೆ ಅವರಿನ್ನೂ ಬದುಕಿದ್ದಾರೆ ಎಂದು ಹೆನ್ರಿ ಒಲೊಂಗಾ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬ್ಯಾಕಪ್‌ ಪಟ್ಟಿ ಸೇರಿದ ಟೀಂ ಇಂಡಿಯಾ ಸ್ಟಾರ್‌ – ವಿಶ್ವಕಪ್‌ ಆಡುವ ಸಂಜು ಸ್ಯಾಮ್ಸನ್‌ ಕನಸು ಭಗ್ನ?

Heath Streak

ಜಿಂಬಾಬ್ವೆ ಕ್ರಿಕೆಟ್‌ ಕಂಡ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಪೈಕಿ ಹೀತ್‌ ಸ್ಟ್ರೀಕ್‌ ಕೂಡ ಒಬ್ಬರು. 12 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದ ಅವರು, ಆಲ್‌ರೌಂಡ್‌ ಆಟದ ಮೂಲಕ ತಮ್ಮದೇ ಛಾಪು ಮೂಡಿಸಿದ್ದರು. 1993ರಲ್ಲಿ ಪಾಕಿಸ್ತಾನ (Pakistan) ವಿರುದ್ಧ ನಡೆದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟಿದ್ದ ಹೀತ್‌ ಸ್ಟ್ರೀಕ್‌, ರಾವಲ್ಪಿಂಡಿಯಲ್ಲಿ ನಡೆದ 2ನೇ ಟೆಸ್ಟ್‌ನಲ್ಲೇ 8 ವಿಕೆಟ್‌ ಪಡೆಯುವ ಮೂಲಕ ವಿಶೇಷ ದಾಖಲೆ ನಿರ್ಮಿಸಿದ್ದರು. ಇದನ್ನೂ ಓದಿ: AsiaCup 2023: ಟೂರ್ನಿಯಲ್ಲಿ ಕಾಣಿಸಿಕೊಳ್ಳುವ ಬ್ಯೂಟಿಫುಲ್‌ ನಿರೂಪಕಿಯರು ಇವರೇ

ಜಿಂಬಾಬ್ವೆಯ ಶ್ರೇಷ್ಠ ಕ್ರಿಕೆಟ್‌ ಆಟಗಾರರಲ್ಲಿ ಒಬ್ಬರಾದ ಸ್ಟ್ರೀಕ್‌ 2000 ಮತ್ತು 2004ರ ವಿಶ್ವಕಪ್‌ ಟೂರ್ನಿ ವೇಳೆ ತಂಡವನ್ನ ಮುನ್ನಡೆಸಿದ್ದರು. 65 ಟೆಸ್ಟ್ ಪಂದ್ಯಗಳು ಮತ್ತು 189 ಏಕದಿನ ಪಂದ್ಯಗಳನ್ನಾಡಿರುವ ಸ್ಟ್ರೀಕ್‌, ಟೆಸ್ಟ್‌ ಕ್ರಿಕೆಟ್‌ನಲ್ಲಿ 100 ವಿಕೆಟ್‌ ಪಡೆದ ಏಕೈಕ ಜಿಂಬಾಬ್ವೆ ಆಟಗಾರ ಎನಿಸಿಕೊಂಡಿದ್ದರು. ಜಿಂಬಾಬ್ವೆ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುತ್ತಿದ್ದ ಹೀತ್‌ ಸ್ಟ್ರೀಕ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ 1,990 ರನ್‌, ಏಕದಿನ ಕ್ರಿಕೆಟ್‌ನಲ್ಲಿ 2,943 ರನ್‌ ಗಳಿಸಿದ್ದಾರೆ. ಹರಾರೆಯಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ ಪಂದ್ಯದಲ್ಲಿ 127 ರನ್‌ ಗಳಿಸಿದ್ದು ಏಕೈಕ ಟೆಸ್ಟ್‌ ಶತಕವಾಗಿದೆ.

2005ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಹೀತ್ ಸ್ಟ್ರೀಕ್ ಆ ಬಳಿಕ 2 ವರ್ಷಗಳ ಒಪ್ಪಂದದೊಂದಿಗೆ 2006 ರಲ್ಲಿ ಇಂಗ್ಲೆಂಡ್‌ನ ಕೌಂಟಿ ತಂಡವಾದ ವಾರ್ವಿಕ್‌ಶೈರ್‌ನ ನಾಯಕರಾಗಿ ಆಯ್ಕೆಯಾದರು. ಆದ್ರೆ ವೈಯಕ್ತಿಕ ಕಾರಣಗಳಿಂದ ಅವರು ಈ ಒಪ್ಪಂದವನ್ನ ಶೀಘ್ರದಲ್ಲೇ ಕೊನೆಗೊಳಿಸಬೇಕಾಯಿತು. ಅಂತಾರಾಷ್ಟ್ರೀಯ ಕ್ರಿಕೆಟ್‌ ನಿವೃತ್ತಿ ನಂತರ ಜಿಂಬಾಬ್ವೆ, ಸ್ಕಾಟ್ಲೆಂಡ್, ಬಾಂಗ್ಲಾದೇಶ, ಐಪಿಎಲ್‌ನಲ್ಲಿ ಗುಜರಾತ್ ಲಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡಗಳಿಗೆ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು.

Web Stories

Share This Article