Connect with us

ಸರ್ಜಿಕಲ್ ಸ್ಟ್ರೈಕ್ 2.0: ಗಡಿ ನುಗ್ಗಿ ಪಾಕ್ ಸೈನಿಕರನ್ನು ಹತ್ಯೆಗೈದ ‘ಘಾತಕ್’ ತಂಡ!

ಸರ್ಜಿಕಲ್ ಸ್ಟ್ರೈಕ್ 2.0: ಗಡಿ ನುಗ್ಗಿ ಪಾಕ್ ಸೈನಿಕರನ್ನು ಹತ್ಯೆಗೈದ ‘ಘಾತಕ್’ ತಂಡ!

ನವದೆಹಲಿ: ಒಂದು ವರ್ಷದ ಬಳಿಕ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಈ ಮೂಲಕ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಸರಿಯಾಗಿ ಪಾಠ ಕಲಿಸಿದೆ.

ಡಿಸೆಂಬರ್ 25ರ ಸಂಜೆಯ ವೇಳೆ ಸೈನಿಕರು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಕದನ ವಿರಾಮ ಉಲ್ಲಂಘಿಸಿ ಭಾರತದತ್ತ ದಾಳಿ ನಡೆಸುತ್ತಿದ್ದ ಮೂವರು ಪಾಕ್ ಸೈನಿಕರನ್ನು ಹತ್ಯೆ ಮಾಡಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ರಾಖಿಕ್ರಿ, ರಾವಲ್ ಕೋಟ್ ಸೆಕ್ಟರ್ ಪಾಕ್ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದೆ. ಭಾರತೀಯ ಸೇನೆಯ ‘ಘಾತಕ್’ ತಂಡ ಗಡಿ ನಿಯಂತ್ರಣ ರೇಖೆಯಿಂದ 200-300 ಮೀಟರ್ ದೂರ ನುಗ್ಗಿ ಈ ದಾಳಿ ನಡೆಸಿದೆ. ಸೇನೆಯ ನಾಲ್ಕು ತುಕಡಿಗಳು ಈ ದಾಳಿಯಲ್ಲಿ ಪಾಲ್ಗೊಂಡಿತ್ತು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದ ಬಗ್ಗೆ ದಾಖಲೆಗಳಿಲ್ಲ: ಡಿಜಿಎಂಒ

ಪಾಕಿಸ್ತಾನಿ ಸೈನಿಕರು ಕೆಲ ದಿನಗಳ ಹಿಂದೆ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ಈ ಗುಂಡಿನ ದಾಳಿಗೆ ದಾಳಿ ಭಾರತದ ಯೋಧ ಪರ್ಗತ್ ಸಿಂಗ್ ಹುತಾತ್ಮರಾಗಿದ್ದರು. ಈ ದಾಳಿಗೆ ಪ್ರತಿಯಾಗಿ ಸೇನೆ ಈ ಕಾರ್ಯಾಚರಣೆ ನಡೆಸಿದೆ.

2016ರ ಸಪ್ಟೆಂಬರ್ 28, 29ರ ಮಧ್ಯರಾತ್ರಿ ವೇಳೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರವನ್ನು ಪ್ರವೇಶಿಸಿ ಸರ್ಜಿಕಲ್ ದಾಳಿ ನಡೆಸಿ 20ಕ್ಕೂ ಹೆಚ್ಚು ಉಗ್ರರನ್ನು ಹತ್ಯೆ ಮಾಡಿತ್ತು. ಈ ಕಾರ್ಯಾಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿ ಡಿಜಿಎಂಒ ಅಧಿಕಾರಿ ಕಾರ್ಯಾಚರಣೆಯ ವಿವರವನ್ನು ನೀಡಿದ್ದರು. ಇದನ್ನೂ ಓದಿ: ಸರ್ಜಿಕಲ್ ಸ್ಟ್ರೈಕ್‍ನಲ್ಲಿ ಯಾರೆಲ್ಲ ಇದ್ದರು ಅನ್ನೋದು ಈಗ ಬಹಿರಂಗವಾಯ್ತು

Advertisement
Advertisement