ಮೈಸೂರು: ನಂಜನಗೂಡು ಉಪಚುನಾವಣೆಗೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಇದೂವರೆಗೂ ದಾಖಲಾಗಿರುವ ದೂರುಗಳು ಹಾಗೂ ಜಪ್ತಿ ಮಾಡಿದ ಹಣದ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಿ. ರಂದೀಪ್ ಹಾಗೂ ಕ್ಷೇತ್ರದ ಭದ್ರತೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣನವರ್ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ರು.
ಇದೂವರೆಗೂ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಅಬಕಾರಿ ಕಾಯ್ದೆಯಡಿ 66 ಪ್ರಕರಣ ದಾಖಲಾಗಿದ್ದು, 20 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು 27,600 ರೂಪಾಯಿ ಬೆಲೆಯ 133 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ. ದಾಖಲೆಯಿಲ್ಲದ ಹಣ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೂವರೆಗೂ 29 ಕೇಸುಗಳು ದಾಖಲಾಗಿದ್ದು, 57,08,920 ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ ಅಂತ ಹೇಳಿದ್ರು.
ಹಣ ಸಾಗಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 30 ಕಾರ್ ಹಾಗೂ ಒಂದು ಸ್ಕೂಟರನ್ನು ವಶಪಡಿಸಿಕೊಳ್ಳಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧ 27 ಕೇಸ್ ದಾಖಲಾಗಿವೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಲ್ಲಿ 31 ಜನರು ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.
ನಂಜನಗೂಡು ಉಪಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಶಾಂತಿಯುತ ಮತದಾನಕ್ಕೆ ಸಕಲ ರೀತಿಯಲ್ಲಿ ಜಿಲ್ಲಾಡಳಿತ ಸಿದ್ಧವಾಗಿದೆ. ಬಿಜೆಪಿಯಿಂದ ಶ್ರೀನಿವಾಸ್ ಪ್ರಸಾದ್ ಮತ್ತು ಕಾಂಗ್ರೆಸ್‍ನಿಂದ ಕೇಶವ್ ಮೂರ್ತಿ ಅವರ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.