ಉಡುಪಿ: ಇಲ್ಲಿನ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ಶ್ರೀಲಂಕಾ ಪ್ರಧಾನಿ ಕುಟುಂಬ ಸಮೇತರಾಗಿ ಭೇಟಿಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು. ಈ ಮೂಲಕ ತನ್ನ ಪತ್ನಿಯ ಬಹು ವರ್ಷದ ಹರಕೆ ತೀರಿಸಿದ್ದಾರೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರಿಗೆ ಶ್ರೀಲಂಕಾ ಪ್ರಧಾನಿ ರೆನಿಲ್ ವಿಕ್ರಮ ಸಿಂಘೆ ಪತ್ನಿ ಡಾ. ಮೈತ್ರಿ ಜೊತೆ ಆಗಮಿಸಿದರು. ಎರಡು ತಿಂಗಳಿಂದ ಕೊಲ್ಲೂರಿಗೆ ಬರಲು ಪ್ರಯತ್ನಿಸುತ್ತಿದ್ದ ಲಂಕಾ ಪ್ರಧಾನಿಗೆ ಇಂದು ಮೂಕಾಂಬಿಕೆಯ ಸನ್ನಿಧಿಗೆ ಬರಲು ಕಾಲ ಕೂಡಿ ಬಂದಿದೆ.
Advertisement
Advertisement
ಶ್ರೀಲಂಕಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಅಲ್ಲಿಂದ ಮಂಗಳೂರು ಮೂಲಕ ಅರೆಶೀರೂರಿಗೆ ಹೆಲಿಕಾಪ್ಟರ್ ನಲ್ಲಿ ಬಂದಿಳಿದರು. ಬಳಿಕ ರಸ್ತೆ ಮಾರ್ಗವಾಗಿ ಆಗಮಿಸಿದ ಪ್ರಧಾನಿ ವಿಕ್ರಮಸಿಂಘೆಯವರನ್ನು ಕೊಲ್ಲೂರು ಆಡಳಿತ ಮಂಡಳಿ ಅದ್ಧೂರಿಯಾಗಿ ಸ್ವಾಗತಿಸಿತು. ದೇವಸ್ಥಾನದ ಮುಂಭಾಗದಲ್ಲಿ ಕಾಲು ತೊಳೆದು ದೇವಸ್ಥಾನ ಮುಖ್ಯದ್ವಾರದ ಮೂಲಕ ಬಲಗಾಲಿಟ್ಟು ಪ್ರವೇಶಿಸಿದರು.
Advertisement
ಇದನ್ನೂ ಓದಿ: ಶ್ರೀಲಂಕಾ ಪ್ರಧಾನಿಯ ಕೊಲ್ಲೂರು ಭೇಟಿ ರದ್ದಾಗಿದ್ದು ಯಾಕೆ?
Advertisement
ಮಂತ್ರ ಪಠಣೆ ಮೂಲಕ ದೇವಾಲಯದ ಪ್ರಮುಖ ಅರ್ಚಕರು ಪ್ರಧಾನಿ ಮತ್ತು ಪತ್ನಿಯನ್ನು ಒಳಗೆ ಕರೆಸಿಕೊಂಡರು. ಗರುಡಗಂಭಕ್ಕೆ ನಮಸ್ಕರಿಸಿ – ಮೂಕಾಂಬಿಕೆಯ ದರ್ಶನ ಮಾಡಿದ ಪ್ರಧಾನಿ, ಚಂಡಿಕಾ ಹೋಮ ಸೇರಿದಂತೆ ದೇವಸ್ಥಾನದ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳಿಗೆ ಭೇಟಿಕೊಟ್ಟು ಅರ್ಚನೆ ಸಲ್ಲಿಕೆ ಮಾಡಿದರು.
ಪ್ರಧಾನಿ ಪತ್ನಿ ಡಾ. ಮೈತ್ರಿ ಕೇರಳ ಮೂಲದವರು. ಕೊಲ್ಲೂರಿನಲ್ಲಿ ಡಾ. ಮೈತ್ರಿಯ ಹಿಂದಿನ ಹರಕೆ ತೀರಿಸಲು ಬಾಕಿಯಿತ್ತು. ಹೀಗಾಗಿ ಆಗಸ್ಟ್ 26 ಮತ್ತು 27ರಂದು ಕೊಲ್ಲೂರಿಗೆ ಬರಲು ಯತ್ನಿಸಿದ್ದರು. ಆದ್ರೆ ಸಿಕ್ಕಾಪಟ್ಟೆ ಮಳೆ ಮತ್ತು ಮೋಡ ಕವಿದ ಕಾರಣ ಕೊಲ್ಲೂರು ಭೇಟಿ ರದ್ಧಾಗಿತ್ತು. ಇದೀಗ ಕೊಲ್ಲೂರು ಬಂದು ದೇವಿ ದರ್ಶನ ಮಾಡಿ ಹರಕೆ ತೀರಿಸುವ ಬಯಕೆ ಪೂರ್ಣಗೊಂಡಿದೆ.
ಶ್ರೀಲಂಕಾ ಪ್ರಧಾನಿ ಕೊಲ್ಲೂರಿಗೆ ಭೇಟಿ- ಕಾಣೆ ಮೀನಿನ ಸ್ಪೆಷಲ್ ಮಾಡೋಕೆ ಸೂಚನೆhttps://t.co/VGChwg9XH6#Mangaluru #Kolluru #ShrilankaPM #RanilWickremesinghe pic.twitter.com/dmO3B7Fu97
— PublicTV (@publictvnews) November 21, 2017
ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ರಾಜಸ್ಥಾನ ಸಿಎಂ ವಸುಂಧರಾ ರಾಜೆ ಭೇಟಿ- ಮೂರೂವೆರೆ ಗಂಟೆ ಭಕ್ತರಿಗಿಲ್ಲ ಪ್ರವೇಶ https://t.co/NgDM7cnAqB#Kollur #Udupi #VasundharaRaje pic.twitter.com/S2yu37bPeg
— PublicTV (@publictvnews) November 20, 2017