ಹುಬ್ಬಳ್ಳಿ: ಕಾಂಗ್ರೆಸ್ ಹಿರಿಯ ನಾಯಕ ಎಸ್.ಆರ್.ಪಾಟೀಲ್ ತಮ್ಮ ಪಕ್ಷ ಕಾಂಗ್ರೆಸ್‍ಗೆ ಗುಡ್ ಬೈ ಹೇಳಲು ತಯಾರಿ ನಡೆಸಿದ್ದಾರೆಂಬ ಅನುಮಾನ ಮೂಡಿದೆ. ಇತ್ತೀಚೆಗೆ ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಎಸ್.ಆರ್.ಪಾಟೀಲ್ ಅವರು ತಮ್ಮ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ಬೆನ್ನಲ್ಲೇ ಎಸ್.ಆರ್.ಪಾಟೀಲ್ ಅಧ್ಯಕ್ಷತೆಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಉಗಮವಾಗಿದೆ.
Advertisement
ಉತ್ತರ ಕರ್ನಾಟಕ ನೀರಿನ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಮೂಲಕ ಕಾಂಗ್ರೆಸ್‍ಗೆ ಟಾಂಗ್ ನೀಡಲು ಭರ್ಜರಿ ತಯಾರಿ ನಡೆದಿದೆ. ಕೃಷ್ಣ-ಮಹಾದಾಯಿ-ನವಲಿ ಸಂಕಲ್ಪಯಾತ್ರೆ ಆರಂಭಗೊಳಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಹಿಂದೆ ಹುಬ್ಬಳ್ಳಿಗೆ ಭೇಟಿ ನೀಡಿದಾಗ ಮಹದಾಯಿ ಹೋರಾಟ ಮಾಡುವ ಬಗ್ಗೆ ಭರವಸೆ ನೀಡಿದ್ದರು. ಇದನ್ನೂ ಓದಿ: ಪತಿ ಹುಟ್ಟುಹಬ್ಬಕ್ಕೆ ಪ್ರಣೀತಾ ಗುಡ್‍ನ್ಯೂಸ್- ಫೋಟೋಶೂಟ್ ಜೊತೆ ಪ್ರೆಗ್ನೆಸಿ ರಿಪೋರ್ಟ್
Advertisement
ಕಾಂಗ್ರೆಸ್ ಪಕ್ಷ ಬಿಟ್ಟು ಎಸ್.ಆರ್.ಪಾಟೀಲ್ ಅವರು ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆಯಲ್ಲಿ ಅಧ್ಯಕ್ಷತೆವಹಿಸಲು ಹೋರಾಟಕ್ಕೆ ಸಜ್ಜಾಗಿದೆ. ಈ ಮೂಲಕ ಕಾಂಗ್ರೆಸ್ ನಾಯಕರಿಗೆ ಸ್ಪಷ್ಟ ಸಂದೇಶ ನೀಡಲು ಮುಂದಾಗಿದ್ದಾರೆ.
Advertisement
Advertisement
ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ಎಸ್.ಆರ್.ಪಾಟೀಲ್, ನೀರಿನ ವಿಚಾರದಲ್ಲಿ ಮತ್ತು ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಎಲ್ಲ ಪಕ್ಷಗಳಿಂದ ಅನ್ಯಾಯವಾಗುತ್ತಿದೆ. ಹೀಗಾಗಿ ಈ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಉಗಮವಾಗಿದ್ದು, ಪಕ್ಷಾತೀತವಾಗಿ ನೀರಿನ ಹೋರಾಟ ಮಾಡುತ್ತೇವೆ. ಕೃಷ್ಣ-ಮಹಾದಾಯಿ-ನವಲಿ ಸಂಕಲ್ಪಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದರು.
ಈ ತಿಂಗಳ 13 ರಿಂದ ಗದಗ ಜಿಲ್ಲೆಯ ನರಗುಂದದಿಂದ ಟ್ರಾಕ್ಟರ್ ರ‍್ಯಾಲಿ ಆರಂಭವಾಗುತ್ತದೆ. ಶಿರಹಟ್ಟಿತ ಫಕೀರ ದಿಂಗಾಲೇಶ್ವರ ಸ್ವಾಮೀಜಿ ರ‍್ಯಾಲಿಗೆ ಚಾಲನೆ ನೀಡಲಿದ್ದಾರೆ. 17ಕ್ಕೆ ರ‍್ಯಾಲಿ ಬಿಳಗಿ ತಾಲೂಕಿನ ಬಾಡಗಂಡಿಯಲ್ಲಿ ಸಮಾರೋಪಗೊಳ್ಳಲಿದೆ. ಬಾಪೂಜಿ ಅಂತರರಾಷ್ಟ್ರೀಯ ಶಾಲೆಯ ಮೈದಾನದಲ್ಲಿ ಬೃಹತ್ ಸಮಾರಂಭ ನಡೆಯಲಿದೆ. ಈ ಸಮಾರಂಭದಲ್ಲಿ 25 ಕ್ಕೂ ಹೆಚ್ಚು ಸ್ವಾಮೀಜಿಗಳು ಪಾಲ್ಗೊಳಲಿದ್ದಾರೆ ಎಂದರು. ಇದನ್ನೂ ಓದಿ: ಕೆಜಿಎಫ್-2 ರಿಲೀಸ್ ಫಿವರ್: ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕ್ ಮಾಡಿದ ಯಶ್ ಮಹಿಳಾ ಫ್ಯಾನ್ಸ್