ನವದೆಹಲಿ: ಮೂರು ಬಾರಿ ಮುಂದೂಡಿಕೆಯಾಗಿದ್ದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ಇಂದು ನಡೆಯಿತು. ನವದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ರಾಜ್ಯದಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ರಾಜ್ಯದ ಇಪ್ಪತ್ತು ಕ್ಷೇತ್ರಗಳಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು.
Advertisement
Advertisement
ಗುರುವಾರ ತಡ ರಾತ್ರಿಯವರೆಗೂ ಸಭೆ ನಡೆಸಿ ರಾಜ್ಯ ನಾಯಕರು ಅಂತಿಮ ಮಾಡಿದ ಪಟ್ಟಿಯನ್ನು ಸಿಇಸಿ ಸಭೆಯಲ್ಲಿ ಇಡಲಾಗಿತ್ತು. ಈ ವೇಳೆ ತುಮಕೂರು ಹೊರತುಪಡಿಸಿ ಹಾಲಿ ಎಲ್ಲ ಸಂಸದರಿಗೂ ಟಿಕೆಟ್ ನೀಡುವ ಸಂಬಂಧ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಯಿತು.
Advertisement
ಮುಸ್ಲಿಂ ಸಮುದಾಯಕ್ಕೆ ಎರಡು ಕ್ಷೇತ್ರಗಳನ್ನು ಬಿಟ್ಟು ಕೊಡಬೇಕೆಂಬ ಮಾತು ಕೇಳಿ ಬಂತು. ಬೆಂಗಳೂರು ಸೆಂಟ್ರಲ್, ಧಾರವಾಡ ಅಥವಾ ಬೀದರ್ ನಿಂದ ಟಿಕೆಟ್ ನೀಡಬೇಕು ಎನ್ನುವ ವಿಚಾರದ ಬಗ್ಗೆ ಚರ್ಚೆ ನಡೆಯಿತು.
Advertisement
ಬೀದರ್ ನಲ್ಲಿ ಈಶ್ವರ್ ಖಂಡ್ರೆಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ ಎನ್ನಲಾಗಿದ್ದು ಹುಬ್ಬಳ್ಳಿ- ಧಾರವಾಡ ಹಾಗೂ ಬೆಂಗಳೂರು ಸೆಂಟ್ರಲ್ ನ ನಿರ್ಧಾರ ನಿರ್ಧಾರ ತೆಗೆದುಕೊಳ್ಳುವಂತೆ ರಾಹುಲ್ ಗಾಂಧಿಗೆ ರಾಜ್ಯ ನಾಯಕರು ಮನವಿ ಮಾಡಿದರು. ಧಾರವಾಡ ಕಟ್ಟಡ ದುರಂತ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿ ವಿನಯ್ ಕುಲಕರ್ಣಿಗೆ ಟಿಕೆಟ್ ನೀಡದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.
ಫೈನಲ್ ಆಗಿರುವ ಕಾಂಗ್ರೆಸ್ ಅಭ್ಯರ್ಥಿಗಳು
ಬಾಗಲಕೋಟೆ – ವೀಣಾ ಕಾಶಪ್ಪನವರ್
ಬೀದರ್ – ಈಶ್ವರ್ ಖಂಡ್ರೆ
ಹಾವೇರಿ – ಡಿಆರ್ ಪಾಟೀಲ್
ಬೆಂಗಳೂರು ಗ್ರಾಮಾಂತರ – ಡಿ.ಕೆ.ಸುರೇಶ್
ಕಲ್ಬುರ್ಗಿ – ಮಲ್ಲಿಕಾರ್ಜುನ್ ಖರ್ಗೆ
ಕೋಲಾರ – ಕೆ.ಹೆಚ್.ಮುನಿಯಪ್ಪ
ಚಿಕ್ಕಬಳ್ಳಾಪುರ – ವೀರಪ್ಪ ಮೊಯ್ಲಿ
ಚಾಮರಾಜನಗರ – ಧ್ರುವನಾರಾಯಣ್
ಚಿತ್ರದುರ್ಗ – ಬಿ.ಎನ್.ಚಂದ್ರಪ್ಪ
ರಾಯಚೂರು- ಬಿ.ವಿ.ನಾಯಕ್
ಬಳ್ಳಾರಿ – ಉಗ್ರಪ್ಪ
ಚಿಕ್ಕೋಡಿ – ಪ್ರಕಾಶ್ ಹುಕ್ಕೇರಿ
ಕಾಂಗ್ರೆಸ್ ಸಂಭಾವ್ಯ ಪಟ್ಟಿ
ದಕ್ಷಿಣ ಕನ್ನಡ – ವಿನಯ್ ಕುಮಾರ್ ಸೊರಕೆ
ಹುಬ್ಬಳ್ಳಿ – ಧಾರವಾಡ – ಶಾಕಿರ್ ಸನದಿ / ಸದಾನಂದ ಡಂಗನವರ್
ಬೆಂಗಳೂರು ಸೆಂಟ್ರಲ್ – ರಿಜ್ವಾನ್ ಅರ್ಷದ್
ಮೈಸೂರು – ವಿಜಯಶಂಕರ್
ಕೊಪ್ಪಳ – ರಾಜಶೇಖರ್ ಹಿಟ್ನಾಳ್
ದಾವಣಗೆರೆ – ಎಸ್ ಎಸ್ ಮಲ್ಲಿಕಾರ್ಜುನ್
ಬೆಂಗಳೂರು ದಕ್ಷಿಣ – ಪ್ರಿಯಾಕೃಷ್ಣಾ