ದುಬೈ: ಮೊದಲ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಗೆದ್ದ ಹಿನ್ನೆಲೆಯಲ್ಲಿ ಪಾಕಿಸ್ತಾನ ಈಗ ಐಸಿಸಿ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ.
ನವದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತವು 53 ರನ್‍ಗಳ ಗೆಲುವು ಪಡೆದುಕೊಂಡಿತು. ಇದರಿಂದ ನಂ.1 ಸ್ಥಾನದಲ್ಲಿದ್ದ ನ್ಯೂಜಿಲೆಂಡ್ 2ನೇ ಸ್ಥಾನಕ್ಕೆ ಕುಸಿದಿದೆ. ಪ್ರಸ್ತುತ ಭಾರತ ತಂಡವು 116 ಅಂಕಗಳೊಂದಿಗೆ ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ 5ನೇ ಸ್ಥಾನವನ್ನು ಪಡೆದುಕೊಂಡಿದೆ.
Advertisement
ಈ ಹಿಂದೆ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಆಡಿದ್ದ 5 ಪಂದ್ಯಗಳಲ್ಲಿಯೂ ಸೋತಿತ್ತು. ಈಗ ಮೊದಲ ಪಂದ್ಯವನ್ನು ಗೆಲ್ಲುವ ಮೊದಲ ಗೆಲುವನ್ನು ಪಡೆದುಕೊಂಡು 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದಿದೆ.
Advertisement
ಭಾರತದ ವಿರುದ್ಧದ ಮೊದಲ ಪಂದ್ಯದಲ್ಲಿ ಸೋಲನ್ನು ಪಡೆಯುವ ಮೂಲಕ ನ್ಯೂಜಿಲೆಂಡ್ ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ 121 ಅಂಕಗಳನ್ನು ಪಡೆದುಕೊಂಡಿದೆ. ಇದರಿಂದ ಪಾಕ್ ತಂಡವು 124 ಅಂಕಗಳನ್ನು ಪಡೆಯುವ ಮೂಲಕ ಐಸಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂ.1 ಸ್ಥಾನವನ್ನು ಪಡೆದುಕೊಂಡಿದೆ.
Advertisement
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಭಾರತ ಕ್ಲೀನ್ ಸ್ವಿಪ್ ಮಾಡಿದರೂ ಸಹ 122 ಅಂಕಗಳನ್ನು ಪಡೆದು 2ನೇ ಸ್ಥಾನಕ್ಕೆ ತೃಪ್ತಿಪಡಬೇಕಾಗುತ್ತದೆ. ಐಸಿಸಿ ಟಿ20 ಪಂದ್ಯಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಆಫ್ರಿಕಾ, ಆಸ್ಟ್ರೇಲಿಯಾ, ಶ್ರೀಲಂಕಾ ತಂಡಗಳು ಕ್ರಮವಾಗಿ 6, 7 ಮತ್ತು 8 ನೇ ಸ್ಥಾನವನ್ನು ಪಡೆದುಕೊಂಡಿದೆ.
Advertisement
India's win today means Pakistan top the @MRFWorldwide ICC T20I Team Rankings for the first time ever! Congratulations! pic.twitter.com/0HsEfVI9qR
— ICC (@ICC) November 1, 2017