ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಜೂನ್ 8ರಿಂದ 20ವರೆಗೆ ಪರೀಕ್ಷೆ ನಡೆಯಲಿದೆ.
ಮರು ಮೌಲ್ಯಮಾಪನ, ಮರು ಎಣಿಗೆ ಅರ್ಜಿ ಸಲ್ಲಿಸಲು ಮೇ 14 ಕೊನೆ ದಿನಾಂಕ ಆಗಿದ್ದು, ಮರು ಮೌಲ್ಯಮಾಪನ ಒಂದು ವಿಷಯಕ್ಕೆ 1,670 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ: ಶೇ.59.56 ವಿದ್ಯಾರ್ಥಿಗಳು ಪಾಸ್, ದಕ್ಷಿಣ ಕನ್ನಡ ಫಸ್ಟ್
Advertisement
ಪರೀಕ್ಷಾ ಅಕ್ರಮ ಎಸೆಗಿದ 17 ವಿದ್ಯಾರ್ಥಿಗಳು ಡಿಬಾರ್ ಆಗಿದ್ದು, ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಹಾಗೂ ಮರು ಮೌಲ್ಯಮಾಪನ ಶುಲ್ಕ ಪಾವತಿಸಲು ಆನ್ ಲೈನ್ ವ್ಯವಸ್ಥೆ ಮಾಡಲಾಗಿದೆ. ಸ್ಕ್ಯಾನಿಂಗ್ ಪ್ರತಿ ಪಡೆಯಲು ಒಂದು ವಿಷಯಕ್ಕೆ 530 ರೂಪಾಯಿ ಆಗಿದ್ದು, ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪಡೆಯಲು ಮೇ 7 ಕೊನೆ ದಿನಾಂಕವಾಗಿದೆ.
Advertisement
ಈ ಬಾರಿ ಉನ್ನತ ಶ್ರೇಣಿಯಲ್ಲಿ 54,692 ವಿದ್ಯಾರ್ಥಿಗಳು ಪಾಸಾಗಿದ್ದು, 2,13,611 ಪ್ರಥಮ ದರ್ಜೆ, 82,532 ದ್ವಿತೀ ದರ್ಜೆ, 57,586 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.