ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ‘ಕೆಡಿ’ ಸಿನಿಮಾದ ನಾಯಕಿ ಯಾರು ಎನ್ನುವುದನ್ನು ಏಪ್ರಿಲ್ 28ಕ್ಕೆ ಘೋಷಿಸುವುದಾಗಿ ನಿರ್ದೇಶಕ ಪ್ರೇಮ್ ತಿಳಿಸಿದ್ದರು. ಸರಿಯಾದ ಸಮಯಕ್ಕೆ ತಮ್ಮ ಚಿತ್ರದ ನಾಯಕಿಯ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಕುತೂಹಲಕ್ಕೆ ತೆರೆ ಎಳೆದಿದ್ದಾರೆ ಪ್ರೇಮ್. ಈ ಹಿಂದೆ ತಮ್ಮದೇ ಸಿನಿಮಾದಲ್ಲಿ ನಟಿಸಿದ್ದ ರೀಷ್ಮಾ ನಾಣಯ್ಯ ಅವರಿಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಕೆಡಿ ಸಿನಿಮಾದಲ್ಲಿ ರೀಷ್ಮಾ ಅವರು ಮಚ್‌ಲಕ್ಷ್ಮೀ ಪಾತ್ರದಲ್ಲಿ ನಟಿಸುತ್ತಿದ್ದಾರೆ.
Advertisement
ಪ್ರೇಮ್ (Jogi Prem) ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ಕೆಡಿ’ (KD) ಒಂದಲ್ಲಾ ಒಂದು ವಿಚಾರವಾಗಿ ಸೌಂಡ್ ಮಾಡುತ್ತಲೇ ಇದೆ. ದಿನದಿಂದ ದಿನಕ್ಕೆ ಚಿತ್ರತಂಡದ ತಾರಾಗಣ ಹಿರಿದಾಗುತ್ತಲೇ ಇದೆ. ಹೀಗಿರುವಾಗ ಧ್ರುವ ಸರ್ಜಾಗೆ (Dhruva Sarja) ನಾಯಕಿಯಾಗಿ ಯಾರು ಸಾಥ್ ಕೊಡುತ್ತಾರೆ ಎಂಬುದನ್ನ ರಿವೀಲ್ ಮಾಡುವುದಕ್ಕೆ ಕೌಂಟ್‌ಡೌನ್ ಶುರುವಾಗಿತ್ತು. ಇದೀಗ ಮಚ್‌ಲಕ್ಷ್ಮೀಯನ್ನು ಅವರು ಪರಿಚಯಿಸಿದ್ದಾರೆ.
Advertisement
Advertisement
ಸೂಪರ್ ಸ್ಟಾರ್‌ಗಳಿರುವ ತಾರಾಗಣ ಅಂದ್ರೆ ಅದು ಕೆಡಿ ಸಿನಿಮಾ. ಧ್ರುವ ಸರ್ಜಾ, ರವಿಚಂದ್ರನ್, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) , ಸಂಜಯ್ ದತ್ (Sanjay Dutt), ಹೀಗೆ ಸ್ಟಾರ್‌ಗಳನ್ನ ಸ್ಟಾರ್ ಡೈರೆಕ್ಟರ್ ನಿರ್ದೇಶಕ ಪ್ರೇಮ್ ನಿರ್ದೇಶನ ಮಾಡ್ತಿದ್ದಾರೆ. ವಿಭಿನ್ನ ಕಥೆ ಹೊತ್ತು, ಪ್ಯಾನ್ ಇಂಡಿಯಾ ಸಿನಿಮಾ ಹೊತ್ತು ತರುತ್ತಿದ್ದಾರೆ. ಇದನ್ನೂ ಓದಿ: ವಿಜಯ್ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್ ಡೇಟ್
Advertisement
KDಗೆ ಪರಭಾಷಾ ನಟಿ ಅಲ್ಲ, ಹೊಸ ಮುಖ ಕೂಡ ಅಲ್ಲ, ರೀಷ್ಮಾ ನಾಣಯ್ಯ (Reeshma Nanaiah) ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈಗಾಗಲೇ ಸಿನಿಮಾ ಚಿತ್ರೀಕರಣದಲ್ಲೂ ಅವರು ಭಾಗಿ ಆಗಿದ್ಧಾರೆ. ಜೋಗಿ ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಚಿತ್ರದಲ್ಲಿ ರೀಷ್ಮಾ ನಟಿಸಿದ್ದರು. ಮಡಿಕೇರಿ ಮೂಲದ ರೀಷ್ಮಾ ಬೆಂಗಳೂರಿನಲ್ಲಿ ಪದವಿ ಮುಗಿಸಿದ್ದಾರೆ. ಮೊದಲ ಚಿತ್ರದಲ್ಲೇ ಆಕೆಯ ನಟನೆ ಗಮನ ಸೆಳೆದಿತ್ತು. ಹಾಗಾಗಿ ‘KD’ ಚಿತ್ರಕ್ಕೂ ಆಕೆನೇ ನಾಯಕಿಯನ್ನಾಗಿ ಆಯ್ಕೆ ಮಾಡಿದ್ದಾರೆ.
1968ರಿಂದ 1978ರ ನಡುವೆ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಈ ರೆಟ್ರೋ ಸಿನಿಮಾ ಕಟ್ಟಿಕೊಡಲಾಗ್ತಿದೆ. ಪ್ಯಾನ್ ಇಂಡಿಯಾ ಸಿನಿಮಾ ಆಗಿರುವುದರಿಂದ ಅದಕ್ಕೆ ತಕ್ಕಂತೆ ಸ್ಟಾರ್‌ಕಾಸ್ಟ್, ಮೇಕಿಂಗ್, ಪ್ರಮೋಷನ್ ಎಲ್ಲವೂ ಇರಲಿದೆ. ಈ ಚಿತ್ರಕ್ಕಾಗಿ ಕೇವಲ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿ ಧ್ರುವ ಸರ್ಜಾ ನಟಿಸ್ತಿದ್ದಾರೆ.