– ಕಿಂಗ್ ಕೊಹ್ಲಿಯನ್ನೇ ಹಿಂದಿಕ್ಕಿದ ರಚಿನ್ ರವೀಂದ್ರ
ಧರ್ಮಶಾಲಾ: ಸದ್ಯ ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ (Virat Kohli), ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಶತಕ ದಾಖಲೆಯನ್ನು ಸರಿಗಟ್ಟುತ್ತಾರೆ ಎಂಬುದು ಚರ್ಚೆಯಲ್ಲಿರುವ ವಿಷಯ. ಈ ನಡುವೆ ಕಿವೀಸ್ ತಂಡದಲ್ಲಿ ಆಡುತ್ತಿರುವ ಬೆಂಗಳೂರು ಮೂಲದ ಯುವಕ ತಾನು ಪ್ರವೇಶಿಸಿದ ಚೊಚ್ಚಲ ವಿಶ್ವಕಪ್ ಆವೃತ್ತಿಯಲ್ಲೇ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನ ಸರಿಗಟ್ಟಿದ್ದಾರೆ.
The ‘chin’ in Rachin Ravindra stands out ????
He’s got as many World Cup centuries before the age of 25 as Sachin Tendulkar did ????#CWC23 #AUSvNZ pic.twitter.com/xctbqxSGwP
— ESPNcricinfo (@ESPNcricinfo) October 28, 2023
Advertisement
ಶನಿವಾರ (ಅ.28) ಧರ್ಮಶಾಲಾದ HPCA ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾದ ತಂಡವು 49.2 ಓವರ್‌ಗಳಿಗೆ 388 ರನ್‌ಗಳಿಗೆ ಆಲೌಟ್ ಆಯಿತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ (New Zealand) 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 383 ರನ್ ಗಳಿಸಿ ವಿರೋಚಿತ ಸೋಲಿಗೆ ತುತ್ತಾಯಿತು. ಇದನ್ನೂ ಓದಿ: World Cup 2023: ಸಿಕ್ಸರ್, ಬೌಂಡರಿಗಳ ಸುರಿಮಳೆ – ಭಾರತದ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಆಸೀಸ್
Advertisement
ಈ ಪಂದ್ಯದಲ್ಲಿ ಆಸೀಸ್ ಬೌಲರ್‌ಗಳನ್ನ ಬೆಂಡೆತ್ತಿದ್ದ ಕಿವೀಸ್ ಆಟಗಾರ ರಚಿನ್ ರವೀಂದ್ರ 77 ಎಸೆತಗಳಲ್ಲೇ 5 ಸಿಕ್ಸರ್, 7 ಬೌಂಡರಿಗಳ ನೆರವಿನೊಂದಿಗೆ ಶತಕ ಸಿಡಿಸಿ ಮಿಂಚಿದರು. ಒಟ್ಟು 89 ಎಸೆತಗಳನ್ನು ಎದುರಿಸಿದ ರವೀಂದ್ರ (Rachin Ravindra) 116 ರನ್ (9 ಬೌಂಡರಿ, 5 ಸಿಕ್ಸರ್) ಬಾರಿಸುವ ಮೂಲಕ ಸ್ಪೋಟಕ ಪ್ರದರ್ಶನ ನೀಡಿ ಗಮನ ಸೆಳೆದರು. ಈ ಶತಕದೊಂದಿಗೆ ಭಾರತದ ಲೆಜೆಂಡ್ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ವಿಶೇಷ ದಾಖಲೆಯೊಂದನ್ನೂ ಸರಿಗಟ್ಟಿದರು.
Advertisement
Advertisement
24 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಏಕದಿನ ವಿಶ್ವಕಪ್ ಇತಿಹಾಸದಲ್ಲಿ 2 ಶತಕಗಳನ್ನು ಗಳಿಸಿದವರಲ್ಲಿ ಸಚಿನ್ ತೆಂಡೂಲ್ಕರ್ ಮೊದಲಿಗರಾಗಿದ್ದರು. ಸಚಿನ್ 23 ವರ್ಷದವರಾಗಿದ್ದಾಗ 1996ರ ವಿಶ್ವಕಪ್‌ನಲ್ಲಿ (World Cup) 2 ಶತಕ ಸಿಡಿಸಿದ್ದರು. ಇದೀಗ 23 ವರ್ಷ ವಯಸ್ಸಿನ ರಚಿನ್ ರವೀಂದ್ರ 2023ರ ವಿಶ್ವಕಪ್ ಟೂರ್ನಿಯಲ್ಲಿ 2 ಶತಕ ಸಿಡಿಸಿ ಸಚಿನ್ ದಾಖಲೆಯನ್ನ ಸರಿಗಟ್ಟಿದ್ದಾರೆ. ಇದನ್ನೂ ಓದಿ: World Cup 2023: ರೋಚಕ ಪಂದ್ಯದಲ್ಲಿ ಆಸೀಸ್‌ಗೆ 5 ರನ್‌ಗಳ ಜಯ – ಹೋರಾಡಿ ಸೋತ ಕಿವೀಸ್
ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಜನಿಸಿದ್ದರೂ ಅವರ ಅಪ್ಪ-ಅಮ್ಮ ಮೂಲತಃ ಬೆಂಗಳೂರಿನವರು. ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಅವರು ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿದ್ದು, ಉದ್ಯೋಗ ಅರಸಿ 1990ರ ದಶಕದಲ್ಲಿ ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ತೆರಳಿದ್ದರು. ರಚಿನ್ ರವೀಂದ್ರ ಅವರ ತಂದೆ, ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದರೂ ಅಪ್ಪಟ ಕ್ರಿಕೆಟ್ ಅಭಿಮಾನಿ. ಅದರಲ್ಲೂ ರವಿ ಕೃಷ್ಣಮೂರ್ತಿ ಅವರು ಭಾರತೀಯ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರ ಪಕ್ಕಾ ಫ್ಯಾನ್. ಈ ಕಾರಣದಿಂದಾಗಿ ರಾಹುಲ್ ದ್ರಾವಿಡ್ (Rahul Dravid) ಹೆಸರಿನಿಂದ ʻರʼ ಮತ್ತು ಸಚಿನ್ ತೆಂಡೂಲ್ಕರ್ (Sachin Tendulkar) ಹೆಸರಿನಿಂದ ʻಚಿನ್ʼ ಅಕ್ಷರಗಳನ್ನು ತೆಗೆದುಕೊಂಡು ತಮ್ಮ ಪುತ್ರನಿಗೆ ರಚಿನ್ ಎಂದು ಹೆಸರಿಟ್ಟಿದ್ದರು ಎಂಬುದು ವಿಶೇಷ. ಇದನ್ನೂ ಓದಿ: IND vs ENG: 2019 ರ ವಿಶ್ವಕಪ್ ಪಂದ್ಯದಲ್ಲಿ ಭಾರತ ಕೊನೆ ಬಾರಿಗೆ ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದಾಗ ಏನಾಗಿತ್ತು?
ಕೊಹ್ಲಿ ಹಿಂದಿಕ್ಕಿದ ರವೀಂದ್ರ: ಪ್ರಸ್ತುತ ವಿಶ್ವಕಪ್ ಕ್ರಿಕೆಟ್‌ನಲ್ಲಿ 354 ರನ್ ಗಳಿಸಿದ್ದ ಕಿಂಗ್ ಕೊಹ್ಲಿ ಅತಿಹೆಚ್ಚು ರನ್ ಗಳಿಸಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದರು. ಆದ್ರೆ ಆಸೀಸ್ ವಿರುದ್ಧ ಸ್ಫೋಟಕ ಶತಕ ಸಿಡಿಸುವ ಮೂಲಕ 6 ಪಂದ್ಯಗಳಲ್ಲಿ 2 ಶತಕ ಸೇರಿ 406 ರನ್ ಗಳಿಸಿರುವ ರಚಿನ್ ರವೀಂದ್ರ ಕೊಹ್ಲಿಯನ್ನು ಹಿಂದಿಕ್ಕಿ 3ನೇ ಸ್ಥಾನಕ್ಕೆ ಜಿಗಿದಿದ್ದಾರೆ. 431 ರನ್ ಗಳಿಸಿರುವ ಕ್ವಿಂಟನ್ ಡಿಕಾಕ್ ಮೊದಲ ಸ್ಥಾನದಲ್ಲಿ, 413 ರನ್ ಗಳಿಸಿರುವ ಡೇವಿಡ್ ವಾರ್ನರ್ 2ನೇ ಸ್ಥಾನದಲ್ಲಿ ಹಾಗೂ 356 ರನ್ ಗಳಿಸಿರುವ ಏಡನ್ ಮಾರ್ಕ್ರಮ್ 4ನೇ ಸ್ಥಾನದಲ್ಲಿದ್ದರೆ, 354 ರನ್ ಗಳಿಸಿರುವ ಕೊಹ್ಲಿ 5ನೇ ಸ್ಥಾನಕ್ಕೆ ಕುಸಿದಿದ್ದಾರೆ.
Web Stories