ಧಾರವಾಡ: ಬಿಲ್ ಪಾವತಿಸದ್ದಕ್ಕೆ ಹೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಪರಿಣಾಮ ವಲಯ ಅರಣ್ಯಾಧಿಕಾರಿ ಕಚೇರಿ ಈಗ ಸಮುದಾಯ ಭವನದಲ್ಲಿ ಕಾರ್ಯನಿರ್ವಹಿಸುವಂತಾಗಿದೆ.
ಇಲ್ಲಿನ ವಲಯ ಅರಣ್ಯಾಧಿಕಾರಿ ಕಚೇರಿಯ ಅಧಿಕಾರಿಗಳು ಕಳೆದ ಕೆಲವು ತಿಂಗಳಿನಿಂದ ವಿದ್ಯುತ್ ಬಿಲ್ ಪಾವತಿಸಿರಲಿಲ್ಲ. ಹೀಗಾಗಿ ಕಚೇರಿಯ 30 ಸಾವಿರ ರೂ. ಹಾಗೂ ಡಿಎಫ್‍ಒ ಸರ್ಕಾರಿ ನಿವಾಸದ ಬಾಕಿ ಸೇರಿದಂತೆ ಒಟ್ಟು 51 ಸಾವಿರ ರೂ. ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯೇ ಕಚೇರಿ ಮತ್ತು ನಿವಾಸದ ವಿದ್ಯುತ್ ಸಂಪರ್ಕವನ್ನು ಹೆಸ್ಕಾಂ ಸಿಬ್ಬಂದಿ ಕಡಿತಗೊಳಿಸಿದ್ದಾರೆ.
Advertisement
Advertisement
ಕಚೇರಿಯಲ್ಲಿ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ತಮ್ಮದೇ ಇಲಾಖೆಯ ಆವರಣದಲ್ಲಿರುವ ಸಮುದಾಯ ಭವನಕ್ಕೆ ಕಂಪ್ಯೂಟರ್ ಗಳನ್ನು ಸಾಗಿಸಲಾಗಿದೆ. ಕೆಲವು ಸಿಬ್ಬಂದಿ ಅಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದಾಗಿ ಕಳೆದ ಎರಡು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಪರದಾಡುತ್ತಿದ್ದಾರೆ.
Advertisement
ಈ ಕುರಿತು ಪ್ರತಿಕ್ರಿಯೆ ನೀಡಲು ಇಲಾಖೆಗೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ. ಇಲಾಖೆಗೆ ಅನುದಾನ ಬಿಡುಗಡೆಯಾಗಿಲ್ಲ. ಇದರಿಂದಾಗಿ ವಿದ್ಯುತ್ ಬಿಲ್ ಪಾವತಿ ಸೇರಿದಂತೆ ವಿವಿಧ ಕಡತಗಳು ಬಾಕಿಯಿವೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv