ಬಳ್ಳಾರಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದ್ದು, ಇತ್ತ ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ಹಳ್ಳ ದಾಟಲು ರಾರಾವಿಯಲ್ಲಿ ಗ್ರಾಮಸ್ಥರು ಜೆಸಿಬಿ ಬಳಸಿ ಹುಚ್ಚಾಟ ಮೆರೆದಿದ್ದಾರೆ.
ಕಳೆದ ಎರಡು ದಿನಗಳಿಂದ ಜಿಲ್ಲೆಯ ಬಹುತೇಕ ತಾಲೂಕಿನಲ್ಲಿ ಮಳೆಯಾಗಿದೆ. ಇತ್ತ ಬಳ್ಳಾರಿ ಸಿರಗುಪ್ಪಾ ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದೆ. ಕಾರಣ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿರೋ ಹಳ್ಳ ದಾಟಲು ರಾರಾವಿಯಲ್ಲಿ ಗ್ರಾಮಸ್ಥರು ಜೆಸಿಬಿ ಬಳಸಿದ ವೀಡಿಯೋ ವೈರಲ್ ಆಗುತ್ತಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೆಳಗ್ಗೆವರೆಗೂ ಬಂದ ಮಳೆ – ರಾತ್ರಿ ಅಬ್ಬರಿಸಿದ ಮಳೆಗೆ ಜನರು ಹೈರಾಣು
Advertisement
ಮಳೆಯಿಂದಾಗಿ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿದ್ದು, ಜೆಸಿಬಿಯ ಬಕೆಟ್‌ನಲ್ಲಿ ಕುಳಿತು, ಬೈಕ್‍ಗಳೊಂದಿಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ಜನರು ದಾಟಿದ್ದಾರೆ. ನಿನ್ನೆ ತಡರಾತ್ರಿ ಆಂಧ್ರ ಮತ್ತು ಸಿರಗುಪ್ಪ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ. ರಾರಾವಿ ಗ್ರಾಮದ ಬಳಿ ಇರುವ ಸೇತುವೆ ಮೇಲೆ ನೀರು ಹರಿದ ಪರಿಣಾಮ, ಆಂಧ್ರ ಮತ್ತು ಕರ್ನಾಟಕಕ್ಕೆ ಸಂಪರ್ಕ ಹೊಂದಿದ್ದ ರಸ್ತೆ ಕಡಿತಗೊಂಡಿದೆ. ಇದನ್ನೂ ಓದಿ: ಭಾರೀ ಮಳೆಗೆ ಶಾರ್ಟ್ ಸರ್ಕ್ಯೂಟ್‌ನಿಂದ ವೃದ್ಧ ಸಾವು