ಇಸ್ರೇಲ್ ವೈಮಾನಿಕ ದಾಳಿ – ಹಿಬ್ಜುಲ್ಲಾ ಡ್ರೋನ್ ಘಟಕದ ಮುಖ್ಯಸ್ಥನ ಹತ್ಯೆ

Public TV
1 Min Read
Israel Hezbollah Conflict 2

ಬೈರುತ್: ಇಸ್ರೇಲ್ (Israel) ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಬ್ಜುಲ್ಲಾದ (Hezbollah) ಡ್ರೋನ್ ಘಟಕದ ಮುಖ್ಯಸ್ಥ ಹತ್ಯೆಗೀಡಾಗಿದ್ದಾನೆ.

ಇಸ್ರೇಲ್ ಸೇನೆಯ ವಾಯುಪಡೆ ಮತ್ತು ಗುಪ್ತಚರ ವಿಭಾಗದ ನಿಖರವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬೈರುತ್‍ನಲ್ಲಿರುವ ಹಿಬ್ಜುಲ್ಲಾ ವಾಯು ಘಟಕದ ಮೇಲೆ ದಾಳಿ ನಡೆಸಲಾಗಿದೆ. ವೈಮಾನಿಕ ದಾಳಿ ನಡೆಸಲಾಗಿದೆ. ಈ ವೇಳೆ ಘಟಕದ ಕಮಾಂಡರ್ ಮೊಹಮ್ಮದ್ ಸ್ರೂರ್ ಹತ್ಯೆಗೀಡಾಗಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್ ಹತ್ಯೆ

ಇತ್ತೀಚೆಗೆ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಕ್ಷಿಪಣಿ ಮತ್ತು ರಾಕೆಟ್ ಫೋರ್ಸ್‍ನ ಕಮಾಂಡರ್ ಇಬ್ರಾಹಿಂ ಮುಹಮ್ಮದ್ ಕಬಿಸಿಯನ್ನು ಹತ್ಯೆ ಮಾಡಿದ್ದಾಗಿ ಇಸ್ರೇಲ್ ಘೋಷಿಸಿತ್ತು.

ಲೆಬನಾನ್ (Lebanon) ಮೇಲೆ ರಾಕೆಟ್ ದಾಳಿ ನಡೆಸಿದ ಬಳಿಕ ಲೆಬನಾನ್‍ನ ಹಿಜ್ಬುಲ್ಲಾ ಭಯೋತ್ಪಾದಕ ಸಂಘಟನೆ ಹಾಗೂ ಇಸ್ರೇಲ್ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ ಲೆಬನಾನ್‍ನಲ್ಲಿ ಕದನ ವಿರಾಮದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

21 ದಿನಗಳ ಕದನವಿರಾಮ ಪ್ರಸ್ತಾಪವನ್ನು ತಿರಸ್ಕರಿಸಿದ ನೆತನ್ಯಾಹು, ಹಿಜ್ಬುಲ್ಲಾ ವಿರುದ್ಧದ ಹೋರಾಟವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಅಲ್ಲದೇ ಯುದ್ಧವು ಇನ್ನಷ್ಟು ತೀವ್ರ ಸ್ವರೂಪ ಪಡೆಯಲಿದೆ, ಪೂರ್ಣಪ್ರಮಾಣದಲ್ಲಿ ಯುದ್ಧ ನಡೆಯಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಲೆಬನಾನ್‍ಗೆ ಬರಬೇಡಿ – ತನ್ನ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ

Share This Article