ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದ (Kalaburagi Central Jail) ಕೈದಿಗಳು ಹೈಫೈ ಜೀವನ ನಡೆಸುತ್ತಿರುವ ಹಲವು ಫೋಟೊ ಹಾಗೂ ವಿಡಿಯೋ ತುಣುಕುಗಳು ವೈರಲ್ ಆಗಿವೆ.
ಇಲ್ಲಿ ಹಣ ಕೊಟ್ಟರೆ ಸ್ಮಾರ್ಟ್ ಫೋನ್, ಗಾಂಜಾ ಸೇರಿದಂತೆ ಕೈದಿಗಳಿಗೆ ರಾಜ್ಯಾತಿಥ್ಯ ಸಿಗುತ್ತಿದೆ ಎಂಬ ಮಾತು ಕೇಳಿ ಬಂದಿದೆ.ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಜೈಲು ಸೇರಿರುವ ಆರೋಪಿಗಳಾದ ವಿಶಾಲ್, ಸಾಗರ್ ಹಾಗೂ ಸೋನು ಎಂಬ ಕೈದಿಗಳ ಹೈಫೈ ಲೈಫ್ ಅನಾವರಣಗೊಂಡಿದೆ. ಇದನ್ನೂ ಓದಿ: ಅಶೋಕ್ ಲಾಜಿಕ್ ಪ್ರಕಾರ ಸಿ.ಟಿ ರವಿ ಭಯೋತ್ಪಾದಕರಾ? – ಪ್ರಿಯಾಂಕ್ ಖರ್ಗೆ ತಿರುಗೇಟು
ಸ್ಮಾರ್ಟ್ ಫೋನ್ ಬಳಸಿ ಸ್ನೇಹಿತರಿಗೆ ಕೈದಿಗಳ ವಿಡಿಯೋ ಕಾಲ್, ಗಾಂಜಾ ಸೇದುತ್ತಾ ಜೈಲಿನಲ್ಲಿ ಸೆಲ್ಫಿಗೆ ಪೋಸ್ ನೀಡುತ್ತಿರುವ ಕೈದಿಗಳ ವಿಡಿಯೋ ಬಹಿರಂಗವಾಗಿವೆ. ಇದನ್ನೂ ಓದಿ: Secunderabad| ಮುತ್ಯಾಲಮ್ಮ ದೇವಸ್ಥಾನದ ವಿಗ್ರಹ ಧ್ವಂಸ – ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನಗೆ ರಾಜಾತಿಥ್ಯ ಪ್ರಕರಣ ಹಿನ್ನೆಲೆ ದರ್ಶನ್ ಆಪ್ತ ಸಹಾಯಕ ನಾಗರಾಜ್ ಕಲಬುರಗಿ ಜೈಲಿಗೆ ಶಿಫ್ಟ್ ಆಗಿದ್ದು, ನಾಗರಾಜ್‌ಗೆ ಕಲಬುರಗಿ ಕೇಂದ್ರಿಯ ಕಾರಾಗೃಹದಲ್ಲಿ ಹೈಫೈ ರಾಜಾತಿಥ್ಯ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಖರ್ಗೆ ಅವರಿಂದ ಹೇಳಿಸಿ ನೋಡೋಣ: ಬಿವೈವಿ ಸವಾಲ್