ಮಡಿಕೇರಿ: ಕೇರಳ ರಾಜ್ಯದ ಕೊಝಿಕ್ಕೋಡ್ (Kozikode) ಜಿಲ್ಲೆಯಲ್ಲಿ ಇಬ್ಬರು ನಿಫಾ (Nipah virus) ವೈರಾಣುವಿನ ಜ್ವರದಿಂದ ಮೃತಪಟ್ಟಿರುವುದು ಖಚಿತವಾಗುತ್ತಿದ್ದಂತೆ ಕೇರಳ ಗಡಿಭಾಗವನ್ನು ಹೊಂದಿಕೊಂಡಂತೆ ಇರುವ ಕೊಡಗು (Kodagu) ಜಿಲ್ಲೆಯಲ್ಲೂ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾರಂಭಿಸಿದೆ. ಜಿಲ್ಲೆಯಲ್ಲಿ ಸೋಂಕಿತರು ಪತ್ತೆಯಾದರೆ ಅವರಿಗೆ ವಿಶೇಷವಾಗಿ ಹಾಗೂ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಇಲ್ಲಿನ ಜಿಲ್ಲಾಸ್ಪತ್ರೆ ಹಾಗೂ ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ ವಿಶೇಷ ವಾರ್ಡ್ ತೆರೆಯಲು ಸಿದ್ಧತೆಗಳನ್ನು ಕೈಗೊಂಡಿದೆ. ಈ ಕುರಿತು ಒಂದು ವರದಿ ಇಲ್ಲಿದೆ.
ಹೌದು. ಕೇರಳ (Kerala) ರಾಜ್ಯಕ್ಕೆ ಹೊಂದಿಕೊಂಡು ಇರುವ ಕೊಡಗು ಜಿಲ್ಲೆಯಲ್ಲೂ ನಿಫಾ ವೈರಸ್ ಹರಡುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅರೋಗ್ಯ ಇಲಾಖೆಯ ಸಿಬ್ಬಂದಿ ಅಧಿಕಾರಿಗಳು ಹೈ ಅಲರ್ಟ್ ಅಗಿದ್ದಾರೆ. ಅಲ್ಲದೇ ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಫಾ ವೈರಸ್ ಸೋಂಕನ್ನು ಹೋಲುವ ಯಾವುದಾದರೂ ಪ್ರಕರಣ ಕಂಡು ಬಂದಲ್ಲಿ ಕೂಡಲೇ ಗಮನಕ್ಕೆ ತರುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ ಸತೀಶ್‍ಕುಮಾರ್ ಮನವಿ ಮಾಡಿದ್ದಾರೆ. ಅಲ್ಲದೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಜ್ವರಪೀಡಿತರ ಸಮೀಕ್ಷೆ ನಡೆಸಲೂ ನಿರ್ಧರಿಸಲಾಗಿದೆ. ಜ್ವರಪೀಡಿತರ ಮೇಲೆ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಸೂಚಿಸಲಾಗಿದೆ. ಇದನ್ನೂ ಓದಿ: 7 ತಿಂಗಳ ಬಳಿಕ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ.ರೂಪಾ ನಿಯೋಜನೆ
ಇನ್ನೂ ಈ ನಿಫಾ ವೈರಸ್ ಹರಡುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾ ಅಸ್ಪತ್ರೆ ಹಾಗೂ ಜಿಲ್ಲೆಯ ಪ್ರಾಥಮಿಕ ಅರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕವಾದ ವಾರ್ಡ್‍ಗಳು ಹಾಗೂ ತುರ್ತಾಗಿ ಏಳು ಬೇಡ್‍ಗಳ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಅಲ್ಲದೇ ಹವಾಮಾನ ವೈಪರೀತ್ಯಗಳಿಂದ ಕೊಡಗು ಜಿಲ್ಲೆಯಲ್ಲಿ ಈಗಾಗಲೇ ದಿನವೊಂದಕ್ಕೆ ಸುಮಾರು 150 ರಿಂದ 200 ಜನರು ಫೀವರ್ ನಿಂದ ಬಳಲುತ್ತಿದ್ದು. ಇದೀಗ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅತ್ಯಂತ ತೀವ್ರವಾಗಿ ಜ್ವರದಿಂದ ಬಳಲುತ್ತಿರುವ ರೋಗಿಗಳ ಮೇಲೆಯೂ ನಿಗಾ ವಹಿಸಲಾಗಿದೆ. ಅಷ್ಟೇ ಅಲ್ಲದೆ ಕೇರಳ ರಾಜ್ಯದಿಂದ ಬರುವ ವ್ಯಕ್ತಿಗಳ ಮೇಲೆಯೂ ನಿಗಾ ಇರಿಸಲಾಗಿದ್ದು, ಕೇರಳದಿಂದ ಬಂದಿರುವ ವ್ಯಕ್ತಿಗಳ ಟ್ರಾವೆಲ್ ಹಿಸ್ಟರಿಯನ್ನು ಪರಿಶೀಲನೆ ಮಾಡಲು ಅರೋಗ್ಯ ಇಲಾಖೆ ಮುಂದಾಗಿದೆ.
ಒಟ್ಟಿನಲ್ಲಿ ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಜಿಲ್ಲಾಡಳಿತ ಹಾಗೂ ಅರೋಗ್ಯ ಇಲಾಖೆ ಕಟ್ಟುನಿಟ್ಟಾಗಿ ಗಡಿಭಾಗದಲ್ಲಿ ಹೈ ಅಲರ್ಟ್ ಅಗಿದು ಅಂತರ್ ರಾಜ್ಯದ ಚೆಕ್ ಪೋಸ್ಟ್ ಗಳಿಂದ ಬರುವ ಕೇರಳದವರ ಮೇಲೆ ನಿಗಾ ವಹಿಸಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]