Connect with us

Bengaluru City

ಎಐಸಿಸಿ ಹುದ್ದೆಗೆ ಬಿಕೆ ಹರಿಪ್ರಸಾದ್ ರಾಜೀನಾಮೆ ತಿರಸ್ಕರಿಸಿದ ಹೈಕಮಾಂಡ್

Published

on

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬಿಕೆ ಹರಿಪ್ರಸಾದ್ ನೀಡಿದ್ದ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿಲ್ಲ.

ಒಡಿಶಾ ರಾಜ್ಯದ ಸ್ಥಳೀಯ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ಮಾ. 9ರಂದು ಬಿ.ಕೆ. ಹರಿಪ್ರಸಾದ್ ರಾಜೀನಾಮೆ ನೀಡಿದ್ದರು. ಆದ್ರೆ ಬಿ.ಕೆ. ಹರಿಪ್ರಸಾದ್ ರಾಜೀನಾಮೆಯನ್ನು ಹೈಕಮಾಂಡ್ ಅಂಗೀಕರಿಸಿಲ್ಲ.

ಮುಂದಿನ ಆದೇಶದವರೆಗೆ ಹುದ್ದೆಯಲ್ಲಿ ಮುಂದುವರೆಯುವಂತೆ ಹರಿಪ್ರಸಾದ್‍ಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

www.publictv.in