ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆ (Assembly Election) ಸನಿಹವಾಗುತ್ತಿರುವ ಹೊತ್ತಲ್ಲೇ ಬಿಜೆಪಿ ಹೈಕಮಾಂಡ್ (BJP High Command) ತೆಗೆದುಕೊಂಡಿರುವ ನಿರ್ಧಾರವೊಂದು ರಾಜ್ಯ ನಾಯಕರಿಗೆ ಹೊಸ ಸವಾಲು ತಂದೊಡ್ಡಿದೆ. ಕರ್ನಾಟಕದಲ್ಲಿ (Karnataka) ಟಿಪ್ಪು V/S ಸಾವರ್ಕರ್ ಫೈಟ್ ಅಜೆಂಡಾದಲ್ಲಿ ಚುನಾವಣೆಗೆ ಬಿಜೆಪಿ ನಾಯಕರು ಸಿದ್ಧವಾಗುತ್ತಿದ್ದರೆ ಇತ್ತ ಹೈಕಮಾಂಡ್ ಮಾತ್ರ ಮುಸ್ಲಿಂ ಸಮುದಾಯದ ಓಲೈಕೆಗೆ ಮುಂದಾಗಿದೆ.
ರಾಷ್ಟ್ರೀಯ ಕಾರ್ಯಕಾರಿಣಿ ನಿರ್ಧಾರದಂತೆ ಮುಸ್ಲಿಂ ಸಮುದಾಯವನ್ನು ಓಲೈಸಿಕೊಳ್ಳಲು ಹೈಕಮಾಂಡ್ ತಿರ್ಮಾನಿಸಿದ್ದು ಮಾರ್ಚ್ 10 ರಿಂದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. 14 ರಾಜ್ಯಗಳಲ್ಲಿ 30% ಅಧಿಕ ಮುಸ್ಲಿಂ ಸಮುದಾಯವಿರುವ 64 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹೈಕಮಾಂಡ್ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.
Advertisement
Advertisement
ಜಮ್ಮು ಮತ್ತು ಕಾಶ್ಮೀರ, ದೆಹಲಿ, ಗೋವಾ, ಹರಿಯಾಣ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತಮಿಳುನಾಡು, ತೆಲಂಗಾಣ, ಮಧ್ಯಪ್ರದೇಶ, ಲಡಾಖ್, ಮಹಾರಾಷ್ಟ್ರ, ಕೇರಳ ಮತ್ತು ಬಿಹಾರದಲ್ಲಿ ಕಾರ್ಯಕ್ರಮಗಳು ರೂಪುಗೊಳ್ಳುತ್ತಿದ್ದು ಇದಕ್ಕಾಗಿ ಉಸ್ತುವಾರಿಗಳನ್ನು ನೇಮಕ ಮಾಡುತ್ತಿದೆ. ಸಮುದಾಯದಲ್ಲಿರುವ 5% ವಿದ್ಯಾವಂತರನ್ನು ತಲುಪುವ ಗುರಿಯನ್ನು ಬಿಜೆಪಿ ಹೊಂದಿದೆ. ಇದನ್ನೂ ಓದಿ: ಇಬ್ಬರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ- ಐಪಿಎಸ್ ರೂಪಾ, ಐಎಎಸ್ ರೋಹಿಣಿ ಸಿಂಧೂರಿ ವರ್ಗಾವಣೆ
Advertisement
ಚುನಾವಣಾ ರಾಜ್ಯ ಕರ್ನಾಟಕದಲ್ಲಿ ಹೈಕಮಾಂಡ್ ಈ ಕಾರ್ಯಕ್ರಮಗಳನ್ನು ಆಯೋಜಿಸುತ್ತಿಲ್ಲ. ಈಗಾಗಲೇ ಟಿಪ್ಪು V/S ಸಾವರ್ಕರ್ ಸೇರಿದಂತೆ ಹಲವು ಹಿಂದುತ್ವದ ಅಜೆಂಡಾಗಳನ್ನು ಬಳಸಿಕೊಳ್ಳುತ್ತಿರುವ ಹಿನ್ನೆಲೆ ಉದ್ದೇಶಪೂರ್ವಕವಾಗಿ ಕರ್ನಾಟಕವನ್ನು ಪಟ್ಟಿಯಿಂದ ಕೈಬಿಟ್ಟಂತೆ ಕಾಣುತ್ತಿದೆ. ಹೈಕಮಾಂಡ್ ಈ ಡಬಲ್ ಸ್ಟ್ಯಾಂಡರ್ಡ್ ರಾಜ್ಯ ಬಿಜೆಪಿ ನಾಯಕರಿಗೆ ಹೊಸ ತಲೆನೋವಾಗಿದೆ.
Advertisement
ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಹೊರ ರಾಜ್ಯಗಳಲ್ಲಿ ಬಿಜೆಪಿ ಮುಸ್ಲಿಂ ಸಮುದಾಯವನ್ನು ಓಲೈಸುತ್ತಿದ್ದರೆ ಇತ್ತ ರಾಜ್ಯದಲ್ಲಿ ಮಾತ್ರ ತದ್ವಿರುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಮುಸ್ಲಿಂ ಮತಗಳೇ ಬೇಡ ಎಂದು ಚುನಾವಣಾ ಪ್ರಚಾರ ಮಾಡುತ್ತಿದ್ದ ರಾಜ್ಯ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಇದನ್ನೂ ಓದಿ: ಮಂಡ್ಯ ಉಸ್ತುವಾರಿಯನ್ನ ಬಿಜೆಪಿ ಪಕ್ಷವೇ ತೆಗೆದುಕೊಂಡಿದೆ : ವಿಜಯೇಂದ್ರ
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k