ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಹೈಕೋರ್ಟ್ ತೀರ್ಪಿನಿಂದ ಜಾಹೀರಾತು ಕಂಪನಿಗಳಿಗೆ ಗೆಲುವು ಸಿಕ್ಕಿದಂತಾಗಿದೆ. ಆದರೆ ಬಿಬಿಎಂಪಿಯ ಅಧಿಕೃತ ಬೋರ್ಡ್ ಗಳಲ್ಲಿ ಮಾತ್ರ ಫ್ಲೆಕ್ಸ್, ಬ್ಯಾನರ್ ಹಾಗೂ ಹೋರ್ಡಿಂಗ್ಸ್ ಹಾಕಬೇಕೇ ಹೊರತು, ಎಲ್ಲೆಂದರಲ್ಲಿ ಹಾಕುವಂತಿಲ್ಲ ಎಂದು ಹೈಕೋರ್ಟ್ ವಾರ್ನಿಂಗ್ ಸಹ ಕೊಟ್ಟಿದೆ.
ಬೆಂಗಳೂರಿನ ಅಂದ ಹೆಚ್ಚಿಸುವ ಸಲುವಾಗಿ ಗುಂಡಿಗಳನ್ನು ಮುಚ್ಚಲು, ಅನಧಿಕೃತ ಫ್ಲೆಕ್ಸ್ ತೆರವು ಮಾಡಲು ಹೈಕೋರ್ಟ್‍ನ ಹಿಂದಿನ ಮುಖ್ಯ ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ ಆದೇಶಿಸಿದ್ದರು. ಅದರಂತೆ 2018ರ ಆಗಸ್ಟ್ 6ರಂದು ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ 1 ವರ್ಷಗಳ ಕಾಲ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ಗಳಿಗೆ ನಿಷೇಧ ಹೇರಿತ್ತು. ಇದನ್ನು ಪ್ರಶ್ನಿಸಿ ಜಾಹೀರಾತು ಕಂಪನಿಗಳು ಹೈಕೋರ್ಟ್ ಮೆಟ್ಟಿಲೇರಿದ್ದವು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಬಿಬಿಎಂಪಿ ನಿರ್ಣಯವನ್ನು ರದ್ದು ಪಡಿಸಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv