ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತೀರ್ಪು ಪ್ರಕಟವಾದ ಬೆನ್ನಲ್ಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 218 ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 17ಎ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.
BNSS ಸೆಕ್ಷನ್ 218, ಭ್ರಷ್ಟಾಚಾರ ತಡೆ ಕಾಯ್ದೆ (PC Act) ಸೆಕ್ಷನ್ 17 ಎ, 19 ರ ಅಡಿ ಪ್ರಾಸಿಕ್ಯೂಷನ್‌ಗೆ ದೂರುದಾರರು ಅನುಮತಿ ಕೇಳಿದ್ದರು. ಪಿಸಿ ಕಾಯ್ದೆಯ 19 ಅಡಿ ಕೇಳಿದ್ದ ಮನವಿಯನ್ನು ರಾಜ್ಯಪಾಲರೇ ತಿರಸ್ಕರಿಸಿದ್ದರು. ಈಗ ಕೋರ್ಟ್ ಬಿಎನ್‌ಎಸ್‌ಎಸ್ ಸೆಕ್ಷನ್ 218ರ ಅಡಿ ನೀಡಿರುವ ಅನುಮತಿಯನ್ನು ತಿರಸ್ಕರಿಸಿದೆ. ನ್ಯಾಯಾಲಯ ಈಗ ಪಿಸಿ ಕಾಯ್ದೆಯ ಸೆಕ್ಷನ್ 17 ಎ ಮಾತ್ರ ಸೀಮಿತಗೊಳಿಸಿ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ರಾಜೀನಾಮೆ ಯಾಕೆ ಕೊಡಬೇಕು? ತನಿಖೆಗೆ ಮಾತ್ರ ಮಾತ್ರ ಅನುಮತಿ, ಪ್ರಾಸಿಕ್ಯೂಷನ್‌ಗೆ ಅಲ್ಲ: ಸಿದ್ದರಾಮಯ್ಯ
Advertisement
Advertisement
17 (ಎ) ಅಡಿ ಹೇಗೆ ತನಿಖೆ?
ಮುಡಾ ಕೇಸಲ್ಲಿ ಈಗ ಪ್ರಾಥಮಿಕ ತನಿಖೆ ನಡೆಸಬಹುದು. ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಮಾಹಿತಿ ಕಲೆ ಹಾಕಬಹುದು. ಅಂದರೆ ಈ ಪ್ರಕರಣದಲ್ಲಿ ಯರ‍್ಯಾರ ಪಾತ್ರವೇನು? ಸಿಎಂ ಪಾತ್ರ, ಪ್ರಭಾವದ ಬಗ್ಗೆ ತನಿಖೆ ನಡೆಸಬಹುದು. ತನಿಖೆಯ ನಂತರ 19 (ಎ) ಅಡಿ ಚಾರ್ಜ್‌ಶೀಟ್ ಸಲ್ಲಿಕೆಗೆ ರಾಜ್ಯಪಾಲರ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಇದನ್ನೂ ಓದಿ: ಸಿಎಂ ಕುಟುಂಬದವರೇ ಫಲಾನುಭವಿ ಆಗಿರೋದ್ರಿಂದ ತನಿಖೆ ಅಗತ್ಯವಿದೆ: ಹೈಕೋರ್ಟ್ ಆದೇಶದಲ್ಲಿ ಏನಿದೆ?
Advertisement
ಏನಿದು ಪ್ರಾಸಿಕ್ಯೂಷನ್?
ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 19 (ಎ) ಅಡಿ ರಾಜ್ಯಪಾಲರು ಅನುಮತಿ ಕೊಟ್ಟಿದ್ದರೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಬಹುದಿತ್ತು. ಆದರೆ ಸೆಕ್ಷನ್ 19 (ಎ) ರಾಜ್ಯಪಾಲರು ಅನುಮತಿ ನೀಡದ ಕಾರಣ ಸಿಎಂ ಸ್ವಲ್ಪ ನಿರಾಳವಾಗಿದ್ದಾರೆ.
Advertisement
ಬಿಎನ್‌ಎಸ್‌ಎಸ್ 218 ಯಾಕಿಲ್ಲ?
ಸಿಎಂ ಪ್ರಕರಣಕ್ಕೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 218 ಅನ್ವಯವಾಗುವುದಿಲ್ಲ. ಜಡ್ಜ್, ಸರ್ಕಾರಿ ಅಧಿಕಾರಿಗಳ ಪ್ರಾಸಿಕ್ಯೂಷನ್‌ಗೆ ಮಾತ್ರ ಈ ಸೆಕ್ಷನ್ ಅನ್ವಯವಾಗುತ್ತದೆ. ವಿಚಾರಣೆ ವೇಳೆ ಈ ವಿಚಾರವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್ ಗಮನಕ್ಕೆ ತಂದಿದ್ದರು.