ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman), ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ
ಚುನಾವಣೆ ಬಾಂಡ್ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಬಿಜೆಪಿ ಲೀಗಲ್ ಸೆಲ್ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠವು ಎಫ್‌ಐಆರ್‌ಗೆ ತಡೆ ನೀಡಿದೆ.
ನಳಿನ್ ಕುಮಾರ್ ಕಟೀಲ್ (Nalin Kumar Kateel) ಪರ ರಾಘವನ್ ವಾದ ಮಂಡಿಸಿದರು. ಪ್ರಕರಣದಲ್ಲಿ ಮಾಡಿರುವ ಆರೋಪಗಳ ಬಗ್ಗೆ ಉಲ್ಲೇಖಿಸಿದರು. ಇತ್ತ ದೂರುದಾರ ಆದರ್ಶ್ ಐಯ್ಯರ್ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದಿಸಿದರು. ಎಸ್‌ಐಟಿ ರಚಿಸಿ ಇದರ ತನಿಖೆ ಮಾಡಬೇಕಿದೆ. ಜನರನ್ನು ಬೆದರಿಸಿ ಹಣ ಕಬಳಿಸಿದ್ದಾರೆ. ತನಿಖಾ ಸಂಸ್ಥೆಗಳನ್ನು ಸುಲಿಗೆ ಮಾಡಲು ಬಳಸಿಕೊಂಡಿದ್ದಾರೆ ಎಂದು ವಾದಿಸಿದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲು – ಕಟೀಲ್ ಎ4, ವಿಜಯೇಂದ್ರ ಎ5
ಇಲ್ಲಿ ಸುಲಿಗೆಯ ವಿಚಾರವೇ ಬರೋದಿಲ್ಲ. ಮೂಲ ಅಂಶವೇ ಇಲ್ಲ ಎಂದರೆ ಒಳಸಂಚು ಸಾಧ್ಯವೇ ಇಲ್ಲ. ಹೀಗಾಗಿ ಪ್ರಕರಣದ ತನಿಖೆಗೆ ಸ್ಟೇ ನೀಡಬೇಕು ಎಂದು ನಳಿನ್ ಕುಮಾರ್ ಕಟೀಲ್ ಪರ ವಕೀಲ ರಾಘವನ್ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಮುಂದಿನ ವಿಚಾರಣೆವರೆಗೂ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದರು.