ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ನೀಡಿದೆ.
ಡಿಕೆ ಶಿವಕುಮಾರ್ (DK Shivakumar) ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕನಕಪುರ ನ್ಯಾಯಾಲಯದ ವ್ಯಾಪ್ತಿಯಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡಿ. ಯಾಕೆಂದರೆ ಡಿಕೆ ಶಿವಕುಮಾರ್ ಬಲಾಢ್ಯರು. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡುತ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡಿ ಎಂದು ಯತ್ನಾಳ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ (Highcourt) ಇಂದು ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.
Advertisement
Advertisement
ಪ್ರಕರಣವೇನು?: ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡಿ ತಮ್ಮ ವಿರುದ್ಧದ ಆದಾಯ ತೆರಿಗೆ ಇಲಾಖೆ (Income Tax Department) ಪ್ರಕರಣಗಳಿಂದ ರಕ್ಷಣೆ ಕೋರಿದ್ದಾರೆ. ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದಾರೆ. ವಿವಿಧ ಮೂಲಗಳ ಜಾಡು ಹಿಡಿದು ನಮ್ಮ ರಾಷ್ಟ್ರೀ ಯ ಅಧ್ಯಕ್ಷರ ಮೇಲೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ. ತಮ್ಮ ವಿರುದ್ಧದ ಇಡಿ ಪ್ರಕರಣಗಳನ್ನು ಮುಕ್ತಾಯಗೊಳಿಸಿದರೆ ಕರ್ನಾ ಟಕದಲ್ಲಿ ಬಿಜೆಪಿ ಸರ್ಕಾ ರ ರಚಿಸಲು ತಮ್ಮ ವಿರೋಧ ಇಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂಬುದು ನನಗೆ ಗೊತ್ತಿದೆ ಎಂದು 2019ರಲ್ಲಿ ವಿಜಯಪುರದಲ್ಲಿ ಯತ್ನಾಳ್ ಹೇಳಿದ್ದರು.
Advertisement
ಯತ್ನಾಳ್ ಅವರ ಹೇಳಿಕೆಯಿಂದ ನನ್ನ ಘನತೆ ಮತ್ತು ವರ್ಚಸ್ಸಿಗೆ ಹಾನಿಯಾಗಿದ್ದು, 204 ಕೋಟಿ ಪರಿಹಾರ ನೀಡುವಂತೆ ಆದೇಶಿಸಬೇಕು ಎಂದು ಕೋರಿ ಶಿವಕುಮಾರ್, ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದನ್ನೂ ಓದಿ: ಮಂಡ್ಯ, ಹಾಸನ, ಕೋಲಾರದಲ್ಲಿ ಜೆಡಿಎಸ್ ಸ್ಪರ್ಧೆ : ಹೆಚ್‌ಡಿಕೆ ಘೋಷಣೆ